ವೇಗದ ಪ್ರೊಸೆಸರ್ ಇರುವ realme P4 5G ಮೊಬೈಲ್ ಇದೀಗ ಭಾರೀ ರಿಯಾಯಿತಿಯಲ್ಲಿ ಲಭ್ಯ!
ಫ್ಲಿಪ್ಕಾರ್ಟ್ನಲ್ಲಿ ರಿಯಲ್ಮಿ P4 5G ಫೋನಿಗೆ ಬಿಗ್ ಆಫರ್
ರಿಯಲ್ಮಿ P4 5G ಮೊಬೈಲ್ 7000mAh ಬ್ಯಾಟರಿ ಸೌಲಭ್ಯ ಪಡೆದಿದೆ
ರಿಯಲ್ಮಿ P4 5G ಸ್ಮಾರ್ಟ್ಫೋನ್ ಮೂರು ಆಕರ್ಷಕ ಕಲರ್ಗಳಲ್ಲಿ ಲಭ್ಯ
Flipkart Big Bang Diwali Sale: ಫ್ಲಿಪ್ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್ಮಿ ಕಂಪನಿಯ realme P4 5G ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ರಿಯಲ್ಮಿ P4 5G ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
realme P4 5G ಭರ್ಜರಿ ಡಿಸ್ಕೌಂಟ್ನಲ್ಲಿ ಲಭ್ಯ
ಮೀಡ್ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್ಮಿ P4 5G ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 45,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 30,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲೂ, ಗ್ರೇ ಮತ್ತು ರೆಡ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ರಿಯಲ್ಮಿ P4 5G ಸ್ಮಾರ್ಟ್ಫೋನ್ ಫೀಚರ್ಸ್
ರಿಯಲ್ಮಿ P4 5G ಮೊಬೈಲ್ನ ಕವರ್ 6.77 FHD+ HyperGlow AMOLED ಡಿಸ್ಪ್ಲೇ ಪಡೆದಿದೆ. ಇದರ ಸ್ಕ್ರೀನ್ 1080 x 2392 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಅಲ್ಲದೇ ಇದು 144Hz ರಿಫ್ರೆಶ್ ರೇಟ್ ಜೊತೆಗೆ 4500 nits ಬ್ರೈಟ್ನೆಸ್ ಸಪೋರ್ಟ್ ಒಳಗೊಂಡಿದೆ. ಹಾಗೆಯೇ ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆ ಪಡೆದಿದೆ.
ಹಾಗೆಯೇ ರಿಯಲ್ಮಿ P4 5G ಮೊಬೈಲ್ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7000mAh ಬ್ಯಾಟರಿ ಬ್ಯಾಕ್ಅಪ್ ಸಪೋರ್ಟ್ ಪಡೆದುಕೊಂಡಿದ್ದು, 80W ಅಲ್ಟ್ರಾ ಚಾರ್ಜ್ ಚಾರ್ಜಿಂಗ್ ಬೆಂಬಲ ಹೊಂದಿದೆ.