ಅಗ್ಗದ ಬೆಲೆಯಲ್ಲಿ ಲಾಂಚ್ ಆಗಿದೆ ಹೊಸ Realme P4 Lite 5G ಸ್ಮಾರ್ಟ್‌ಫೋನ್!
ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್ P4 ಲೈಟ್ 5G ಫೋನ್ ಖರೀದಿಗೆ ಲಭ್ಯ
ರಿಯಲ್ P4 ಲೈಟ್ 5G ಮೊಬೈಲ್ 13MP ಪ್ರಾಥಮಿಕ ಕ್ಯಾಮೆರಾ ಹೊಂದಿದೆ
ರಿಯಲ್‌ಯ ಈ ನೂತನ ಸ್ಮಾರ್ಟ್‌ಫೋನ್ 7000mAh ಬ್ಯಾಟರಿ ಸಾಮರ್ಥ್ಯ ಪಡೆದಿದೆ
ಜನಪ್ರಿಯ ರಿಯಲ್‌ಮಿ ಸಂಸ್ಥೆಯು ತನ್ನ ಹೊಸ Realme P4 Lite 5G ಸ್ಮಾರ್ಟ್‌ಫೋನ್ ಅನ್ನು ಇಂದು (ಮಾರ್ಚ್ 19 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಮೊಬೈಲ್ ಆಕ್ಟಾ ಕೋರ್ MediaTek Dimensity 6300 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡುವ ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಪಡೆದಿದೆ. ಹಾಗೆಯೇ 7000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನಿನ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಈ ಮೊಬೈಲ್ ಮೊಸಾಯಿಕ್ ಬ್ಲೂ ಮತ್ತು ಮೊಸಾಯಿಕ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೆ ರಿಯಲ್ P4 ಲೈಟ್ 5G ಮೊಬೈಲ್‌ನ ಬೆಲೆ, ಮಾರಾಟದ ಮಾಹಿತಿ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ನಾಳೆ Oppo K14 5G ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ! ಬೆಲೆ ಮತ್ತು ಆಫರ್ ಮಾಹಿತಿ ನೋಡಿ
Realme P4 Lite 5G ಮೊಬೈಲ್ ಬೆಲೆ ಮತ್ತು ಲಭ್ಯತೆ
ನೂತನವಾಗಿ ಮಾರುಕಟ್ಟೆ ಪ್ರವೇಶಿಸಿರುವ ರಿಯಲ್ P4 ಲೈಟ್ 5G ಮೊಬೈಲ್ ಅಗ್ಗದ ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 12,999 ರೂಗಳು ಆಗಿದೆ. ಹಾಗೆಯೇ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 13,999 ರೂಗಳು ಆಗಿದೆ. ಅದೇ ರೀತಿ 6GB + 128GB ವೇರಿಯಂಟ್ ಬೆಲೆ 15,999 ರೂಗಳು ಆಗಿದೆ. ಗ್ರಾಹಕರು 1000 ರೂ.ಗಳ ಬೆಲೆಯ ಕೊಡುಗೆ ಮತ್ತು 500 ರೂಗಳ ಬ್ಯಾಂಕ್ ಆಫರ್ ಪಡೆಯಬಹುದು. ಇನ್ನು ಈ ಫೋನ್ ಮಾರಾಟ ಇದೇ ಮಾರ್ಚ್ 25 ರಂದು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಆಸಕ್ತ ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಸಬಹುದು. ಹಾಗೆಯೇ ಮೊಸಾಯಿಕ್ ಬ್ಲೂ ಮತ್ತು ಮೊಸಾಯಿಕ್ ಗ್ರೀನ್ ಕಲರ್‌ಗಳ ಆಯ್ಕೆಯಲ್ಲಿ ಲಭ್ಯ.

ರಿಯಲ್ P4 ಲೈಟ್ 5G ಮೊಬೈಲ್ ಫೀಚರ್ಸ್ ಹೀಗಿವೆ
ನೂತನ ರಿಯಲ್ P4 ಲೈಟ್ 5G ಮೊಬೈಲ್ 6.8 ಇಂಚಿನ HD+ IPS LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 900 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 64GB, 4GB + 128GB ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಮೈಕ್ರೋ SD ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸುವ ಆಯ್ಕೆ ಸಹ ಒಳಗೊಂಡಿದೆ.
ರಿಯಲ್ P4 ಲೈಟ್ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 13MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಎರಡನೇ ಕ್ಯಾಮೆರಾ ಬೇಸಿಕ್ ಸೆನ್ಸರ್ ಸೌಲಭ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಮೆಗಾಪಿಕ್ಸಲ್ ಕ್ಯಾಮೆರಾ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 15W ವೈರ್ಡ್ ಚಾರ್ಜಿಂಗ್ ಬೆಂಬಲ ಸಹ ಪಡೆದುಕೊಂಡಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile