Realme P4 Lite 5G ಮೊಬೈಲ್‌ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ ತಾಣದಲ್ಲಿ ರಿಯಲ್‌ P4 ಲೈಟ್‌ ಆಫರ್‌ನಲ್ಲಿ ಲಭ್ಯ

ರಿಯಲ್‌ P4 ಲೈಟ್‌ ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ

ರಿಯಲ್‌ P4 ಲೈಟ್‌ MediaTek Dimensity 6300 ಪ್ರೊಸೆಸರ್‌ ಹೊಂದಿದೆ

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ರಿಯಲ್‌ಮಿ ಕಂಪನಿಯ Realme P4 Lite 5G ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ P4 ಲೈಟ್‌ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Vivo V70 Elite ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ; 6,500mAh ಸಾಮರ್ಥ್ಯದ ಬ್ಯಾಟರಿ

Realme P4 Lite 5G ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ರಿಯಲ್‌ P4 ಲೈಟ್‌ ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 28,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 15,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಮೂರು ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

Realme P4 Lite

ರಿಯಲ್‌ P4 ಲೈಟ್‌ 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ನೂತನ ರಿಯಲ್‌ P4 ಲೈಟ್‌ 5G ಮೊಬೈಲ್ 6.8 ಇಂಚಿನ HD+ IPS LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 900 nits ಬ್ರೈಟ್ನೆಸ್‌ ಹೊಂದಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 64GB, 4GB + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಮೈಕ್ರೋ SD ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸುವ ಆಯ್ಕೆ ಸಹ ಒಳಗೊಂಡಿದೆ.

ರಿಯಲ್‌ P4 ಲೈಟ್‌ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 13MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಎರಡನೇ ಕ್ಯಾಮೆರಾ ಬೇಸಿಕ್ ಸೆನ್ಸರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಮೆಗಾಪಿಕ್ಸಲ್ ಕ್ಯಾಮೆರಾ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 15W ವೈರ್ಡ್ ಚಾರ್ಜಿಂಗ್‌ ಬೆಂಬಲ ಸಹ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :