ಕನ್ಫರ್ಮ್ ಆಯ್ತು Realme P4 Lite 5G ಬಿಡುಗಡೆ ದಿನಾಂಕ! ಕೀ ಫೀಚರ್ಸ್‌ ಇಲ್ಲಿವೆ ನೋಡಿ

HIGHLIGHTS

ರಿಯಲ್‌ P4 ಲೈಟ್‌ 5G ಮೊಬೈಲ್‌ ಮಾರ್ಚ್‌ 19 ರಂದು ಬಿಡುಗಡೆ ಆಗಲಿದೆ

ರಿಯಲ್‌ P4 ಲೈಟ್‌ 5G ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಪಡೆದಿರಲಿದೆ

ರಿಯಲ್‌ P4 ಲೈಟ್‌ 5G ಮೊಸಾಯಿಕ್ ಬ್ಲೂ ಮತ್ತು ಮೊಸಾಯಿಕ್ ಗ್ರೀನ್‌ ಕಲರ್‌ ಆಯ್ಕೆ ಒಳಗೊಂಡಿರಲಿದೆ

ಕನ್ಫರ್ಮ್ ಆಯ್ತು Realme P4 Lite 5G ಬಿಡುಗಡೆ ದಿನಾಂಕ! ಕೀ ಫೀಚರ್ಸ್‌ ಇಲ್ಲಿವೆ ನೋಡಿ

ರಿಯಲ್‌ಮಿ ಕಂಪನಿಯು ಕಳೆದ ತಿಂಗಳು ಬಜೆಟ್‌ ದರದಲ್ಲಿ ರಿಯಲ್‌ P4 ಲೈಟ್‌ 4G ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿ ಗ್ರಾಹಕರ ಗಮನ ಸೆಳೆದಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ಕಂಪನಿಯು Realme P4 Lite 5G ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಅಂದಹಾಗೆ ಈ ಹೊಸ ಫೋನ್‌ ಇದೇ ವಾರದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಇನ್ನು ಈ ಮೊಬೈಲ್‌ 7,000mAh ಬ್ಯಾಟರಿ ಸಪೋರ್ಟ್‌ ಪಡೆದಿರಲಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಹಾಗಾದರೇ ಹೊಸದಾಗಿ ಮಾರುಕಟ್ಟೆಗೆ ಬರಲಿರುವ ರಿಯಲ್‌ P4 ಲೈಟ್‌ 5G ಸ್ಮಾರ್ಟ್‌ಫೋನ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : ನಾಳೆ ಮಾರುಕಟ್ಟೆಗೆ ಬರಲಿದೆ Samsung Galaxy M17e 5G! ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ

Realme P4 Lite 5G ಸ್ಮಾರ್ಟ್‌ಫೋನ್‌ ಲಾಂಚ್‌ ಅಪ್‌ಡೇಟ್ಸ್‌

ರಿಯಲ್‌ಮಿ ಕಂಪನಿಯು ಹೊಸದಾಗಿ ರಿಯಲ್‌ P4 ಲೈಟ್‌ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 19 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಇನ್ನು ಈ ಮುಂಬರುವ ಫೋನ್‌ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟ ಪ್ರಾರಂಭಿಸಲಿದೆ. ಹಾಗೆಯೇ ಇದು ಮೊಸಾಯಿಕ್ ಬ್ಲೂ ಮತ್ತು ಮೊಸಾಯಿಕ್ ಗ್ರೀನ್‌ ಕಲರ್‌ಗಳ ಆಯ್ಕೆಯಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳು ಇವೆ.

Realme P4 Lite 5G

ರಿಯಲ್‌ P4 ಲೈಟ್‌ 5G ಮೊಬೈಲ್‌ ನಿರೀಕ್ಷಿತ ಫೀಚರ್ಸ್‌

ರಿಯಲ್‌ ಕಂಪನಿಯ ಹೊಸ ರಿಯಲ್‌ P4 ಲೈಟ್‌ 5G ಫೋನ್‌ 144Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.74 ಇಂಚಿನ ಡಿಸ್‌ಪ್ಲೇ ಅನ್ನು ಪಡೆದುಕೊಂಡಿರಲಿದೆ. ಇನ್ನು ನೂತನ 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿರಲಿದ್ದು ಇದಕ್ಕೆ ಪೂರಕವಾಗಿ 44W ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿರಲಿದೆ.

ವಿವೋ T5x 5G ಸ್ಮಾರ್ಟ್‌ಫೋನ್‌ ಡ್ಯುಯಲ್ ಮ್ಯಾಟ್ರಿಕ್ಸ್ AI ಕ್ಯಾಮೆರಾ ಸೆಟ್‌ಅಪ್‌ ಎಂದು ಟೀಸ್ ಮಾಡಲಾಗಿದೆ. ಇದು 13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿರಲಿದ್ದು ಹಾಗೆಯೇ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಆಯ್ಕೆ ಸಹ ಪಡೆದಿರಲಿದೆ. ಇನ್ನು ಈ ಫೋನ್‌ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ UI 7.0 ಕಾರ್ಯಕ್ಷಮತೆ ಬೆಂಬಲಿಸಲಿದೆ. ಧೂಳು ಮತ್ತು ತುಂತುರು ನಿರೋಧಕತೆಗಾಗಿ ಈ ಫೋನ್‌ IP64 ರೇಟಿಂಗ್‌ ಸೌಲಭ್ಯ ಒಳಗೊಂಡಿರುವ ಜೊತೆಗೆ MIL-STD-810H ಶಾಕ್‌ ನಿರೋಧಕತೆ ಸೌಲಭ್ಯ ನೀಡಲಿದೆ ಎನ್ನಲಾಗಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo