ರಿಯಲ್‌ಮಿ ಕಂಪನಿಯ Realme P4 Lite ಮೊಬೈಲ್ ಕಡಿಮೆ ಪ್ರೈಸ್ ಹಾಗೂ ಅಧಿಕ ಬ್ಯಾಟರಿ ಆಯ್ಕೆಯ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ UNISOC T7250 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,300mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಸೀ ಬ್ಲೂ, ಓಸಿಡೀಯನ್ ಬ್ಲ್ಯಾಕ್ ಹಾಗೂ ಬೀಚ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P4 ಲೈಟ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸಖತ್ ಸ್ಟೈಲಿಶ್ ಲುಕ್ ಇರುವ Oppo K14x 5G ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಅಗ್ಗದ ಬೆಲೆಯ ಹಾಗೂ ಬಿಗ್ ಬ್ಯಾಟರಿ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರಿಯಲ್‌ಮಿ P4 ಲೈಟ್ ಸ್ಮಾರ್ಟ್‌ಫೋನ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 12,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಸೀ ಬ್ಲೂ, ಓಸಿಡೀಯನ್ ಬ್ಲ್ಯಾಕ್ ಹಾಗೂ ಬೀಚ್ ಗೋಲ್ಡ್ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ರಿಯಲ್‌ಮಿ P4 ಲೈಟ್ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಸೌಲಭ್ಯ ಒಳಗೊಂಡ 6.74 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 720 x 1600 ಪಿಕ್ಸೆಲ್‌ಗಳು ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು 563 nits ಬ್ರೈಟ್ನೆಸ್ ಸಪೋರ್ಟ್ ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಅಂದಹಾಗೆ ಈ ಫೋನ್ ಆಕ್ಟಾ ಕೋರ್ UNISOC T7250 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು ಇದರೊಂದಿಗೆ 4GB RAM + 64GB ಹಾಗೂ 4GB + 128GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆ ಪಡೆದಿದೆ.
ಹಾಗೆಯೇ ರಿಯಲ್‌ಮಿ P4 ಲೈಟ್ ಸ್ಮಾರ್ಟ್‌ಫೋನ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿರುವ ಜೊತೆಗೆ 15W VOOC ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ ಹಿಂಭಾಗದಲ್ಲಿ ಈ ಫೋನ್ 13MP ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದಲ್ಲದೆ ಈ ಮೊಬೈಲ್ 7.94mm ದಪ್ಪ ಮತ್ತು 201 ಗ್ರಾಂ ತೂಕವನ್ನು ಹೊಂದಿದೆ. ಹಾಗೆಯೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP54 ರೇಟಿಂಗ್ ಸೌಲಭ್ಯ ಪಡೆದಿದೆ.