Realme P4 Lite
Realme ಮೊಬೈಲ್ ಬ್ರ್ಯಾಂಡ್ ಇತ್ತೀಚಿಗೆ ಬಿಡುಗಡೆ ಮಾಡಿರುವ Realme P4 Lite ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಮೊಬೈಲ್‌ನ ಮಾರಾಟ ನಾಳೆ (ಫೆಬ್ರವರಿ 24 ರಿಂದ) ಪ್ರಾರಂಭವಾಗಲಿದೆ. ಈ ಮೊಬೈಲ್ UNISOC T7250 ಪ್ರೊಸೆಸರ್ ಪವರ್ ಅನ್ನು ಒಳಗೊಂಡಿರುವ ಜೊತೆಗೆ ಬರೋಬ್ಬರಿ 6,300mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ Realme P4 Lite ಸ್ಮಾರ್ಟ್‌ಫೋನ್ ಬ್ಲೂ, ಬ್ಲ್ಯಾಕ್ ಹಾಗೂ ಗೋಲ್ಡ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ Realme P4 Lite ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಆಫರ್‌ನಲ್ಲಿ POCO M7 Plus ಮೊಬೈಲ್ ಖರೀದಿಸಲು ಇದಕ್ಕಿಂತ ಒಳ್ಳೆಯ ಸಮಯ ಬೇಕೆ?
ರಿಯಲ್‌ಮಿ ಸಂಸ್ಥೆಯ Realme P4 Lite ಮೊಬೈಲ್ ನಾಳೆ (ಫೆಬ್ರವರಿ 24 ರಿಂದ) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಫೋನಿನ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 7,999 ರೂಗಳು ಆಗಿದೆ. ಹಾಗೆಯೇ 4GB + 128GB ವೇರಿಯಂಟ್ ಮೊಬೈಲ್ 9,999 ರೂಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಮೊಬೈಲ್ ಸೀ ಬ್ಲೂ, ಓಸಿಡೀಯನ್ ಬ್ಲ್ಯಾಕ್ ಹಾಗೂ ಬೀಚ್ ಗೋಲ್ಡ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್, ರಿಯಲ್‌ಮಿ ವೆಬ್‌ಸೈಟ್ ಹಾಗೂ ರಿಯಲ್‌ಮಿ ಸ್ಟೋರ್‌ಗಳ ಮೂಲಕ ಖರೀದಿ ಮಾಡಬಹುದು.
Realme P4 Lite ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಸೌಲಭ್ಯ ಒಳಗೊಂಡ 6.74 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 720 x 1600 ಪಿಕ್ಸೆಲ್‌ಗಳು ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು 563 nits ಬ್ರೈಟ್ನೆಸ್ ಸಪೋರ್ಟ್ ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಅಂದಹಾಗೆ ಈ ಫೋನ್ ಆಕ್ಟಾ ಕೋರ್ UNISOC T7250 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು ಇದರೊಂದಿಗೆ 4GB RAM + 64GB ಹಾಗೂ 4GB + 128GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆ ಪಡೆದಿದೆ.
ಇನ್ನು Realme P4 Lite ಸ್ಮಾರ್ಟ್‌ಫೋನ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿರುವ ಜೊತೆಗೆ 15W VOOC ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ ಹಿಂಭಾಗದಲ್ಲಿ ಈ ಫೋನ್ 13MP ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದಲ್ಲದೆ ಈ ಮೊಬೈಲ್ 7.94mm ದಪ್ಪ ಮತ್ತು 201 ಗ್ರಾಂ ತೂಕವನ್ನು ಹೊಂದಿದೆ. ಹಾಗೆಯೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP54 ರೇಟಿಂಗ್ ಸೌಲಭ್ಯ ಪಡೆದಿದೆ.