Digit.in

ಕಡಿಮೆ ಪ್ರೈಸ್‌ಟ್ಯಾಗ್‌ ಹೊಂದಿರುವ Realme P4 Lite ಮೊಬೈಲ್‌ ಈಗ ಮತ್ತಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ P4 ಲೈಟ್‌ ಮೊಬೈಲ್‌ಗೆ ಬೆಸ್ಟ್‌ ಆಫರ್‌

ರಿಯಲ್‌ P4 ಲೈಟ್‌ ಮೊಬೈಲ್‌ 7,000mAh ಬ್ಯಾಟರಿ ಸೌಲಭ್ಯ ಪಡೆದಿದೆ

ರಿಯಲ್‌ P4 ಲೈಟ್‌ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಕಡಿಮೆ ಪ್ರೈಸ್‌ಟ್ಯಾಗ್‌ ಹೊಂದಿರುವ Realme P4 Lite ಮೊಬೈಲ್‌ ಈಗ ಮತ್ತಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ!

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme P4 Lite ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ P4 ಲೈಟ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Realme P4 Lite ಮೊಬೈಲ್ ಬೆಲೆಯಲ್ಲಿ ಇಳಿಕೆ

ಕಡಿಮೆ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ P4 ಲೈಟ್‌ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 24,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 12,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಮೂರು ಆಕರ್ಷಕ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Realme P4 Lite 5G gets huge price discount on Flipkart Big Billion Days Sale
Realme P4 Lite 5G

ರಿಯಲ್‌ P4 ಲೈಟ್‌ 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ರಿಯಲ್‌ P4 ಲೈಟ್‌ 5G ಮೊಬೈಲ್ 6.8 ಇಂಚಿನ HD+ IPS LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 900 nits ಬ್ರೈಟ್ನೆಸ್‌ ಹೊಂದಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 64GB, 4GB + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಮೈಕ್ರೋ SD ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸುವ ಆಯ್ಕೆ ಸಹ ಒಳಗೊಂಡಿದೆ.

ರಿಯಲ್‌ P4 ಲೈಟ್‌ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 13MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಎರಡನೇ ಕ್ಯಾಮೆರಾ ಬೇಸಿಕ್ ಸೆನ್ಸರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಮೆಗಾಪಿಕ್ಸಲ್ ಕ್ಯಾಮೆರಾ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 15W ವೈರ್ಡ್ ಚಾರ್ಜಿಂಗ್‌ ಬೆಂಬಲ ಸಹ ಪಡೆದುಕೊಂಡಿದೆ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile