Realme P4 Power 5G ಫೋನ್‌ ಬೆಲೆಯಲ್ಲಿ ಭರ್ಜರಿ ಕಡಿತ; 10,001mAh ಬ್ಯಾಟರಿ ಇದೆ

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme P4 Power 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7400 Ultra ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 10,001mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P4 ಪವರ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Realme P4 Power 5G ಮೊಬೈಲ್ ಈಗ ಆಫರ್‌ನಲ್ಲಿ ಲಭ್ಯ

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ P4 ಪವರ್ 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 50,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 29,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಟ್ರಾನ್ಸ್‌ಸಿಲ್ವರ್, ಟ್ರಾನ್ಸ್‌ಆರೆಂಜ್ ಮತ್ತು ಟ್ರಾನ್ಸ್‌ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ರಿಯಲ್‌ಮಿ P4 ಪವರ್ 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ರಿಯಲ್‌ಮಿ P4 ಪವರ್ 5G ಫೋನ್‌ 6.8 ಇಂಚಿನ 1.5K 4D ಕರ್ವ್+ ಹೈಪರ್‌ಗ್ಲೋ ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಜೊತೆಗೆ 6,500 ನಿಟ್‌ಗಳ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್‌ MediaTek Dimensity 7400 Ultra ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದ್ದು ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ ಯುಐ 7.0 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು ಇದರಲ್ಲಿ 50MP ಪ್ರಾಥಮಿಕ ಕ್ಯಾಮೆರಾವು ಸೋನಿ IMX882 ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸೌಲಭ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಇದು 4K/30fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ ಪ್ರಮುಖ ಹೈಲೈಟ್‌ ಎಂದರೆ ಅದರ ಬ್ಯಾಟರಿ ಆಗಿದೆ. ಇದು 10,001mAh ಸಿಲಿಕಾನ್ ಕಾರ್ಬನ್ ಟೈಟಾನ್ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile