ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ರಿಯಲ್‌ಮಿ ಸಂಸ್ಥೆಯ ಹಲವು ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಆ ಪೈಕಿ ಇತ್ತೀಚಿನ realme P4 Power 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 10,001mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P4 ಪವರ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಟ್ರಿಪಲ್ ಕ್ಯಾಮೆರಾ ಇರುವ Xiaomi 17 ಈಗ ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯ
ಬಿಗ್ ಬ್ಯಾಟರಿ ಸೇರಿದಂತೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ P4 ಪವರ್ 5G ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 32,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 25,429 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ ಟ್ರಾನ್ಸ್‌ಸಿಲ್ವರ್, ಟ್ರಾನ್ಸ್‌ಆರೆಂಜ್ ಮತ್ತು ಟ್ರಾನ್ಸ್‌ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ರಿಯಲ್‌ಮಿಯ ಈ ಫೋನ್ 6.8 ಇಂಚಿನ 1.5K 4D ಕರ್ವ್+ ಹೈಪರ್‌ಗ್ಲೋ ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 6,500 ನಿಟ್‌ಗಳ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ MediaTek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್ ಹೊಂದಿದ್ದು ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ ಯುಐ 7.0 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ರಿಯಲ್‌ಮಿ P4 ಪವರ್ 5G ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು ಇದರಲ್ಲಿ 50MP ಪ್ರಾಥಮಿಕ ಕ್ಯಾಮೆರಾವು ಸೋನಿ IMX882 ಜೊತೆಗೆ OIS ಸೌಲಭ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಇದು 4K/30fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ 10,001mAh ಸಿಲಿಕಾನ್ ಕಾರ್ಬನ್ ಟೈಟಾನ್ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ.