10,001mAh ಬ್ಯಾಟರಿ ಇರುವ Realme ಕಂಪನಿಯ ಈ ಫೋನ್ ಈಗ ಆಫರ್‌ನಲ್ಲಿ ಲಭ್ಯ!
ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ಮಿ P4 ಪವರ್ 5G ಈಗ ಆಫರ್‌ನಲ್ಲಿ ಲಭ್ಯ
ರಿಯಲ್‌ಮಿ P4 ಪವರ್ 5G ಫೋನ್ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಪಡೆದಿದೆ
10,001mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಈ ಫೋನಿನ ಪ್ರಮುಖ ಹೈಲೈಟ್ ಆಗಿದೆ
ರಿಯಲ್‌ಮಿ ಮೊಬೈಲ್ ಕಂಪನಿಯ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾಗಿರುವ Realme P4 Power 5G ಮೊಬೈಲ್ ಈಗಾಗಲೇ ಬಿಗ್ ಬ್ಯಾಟರಿ ಹಾಗೂ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ MediaTek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಫೋನ್ ಟ್ರಾನ್ಸ್‌ಸಿಲ್ವರ್, ಟ್ರಾನ್ಸ್‌ಆರೆಂಜ್ ಮತ್ತು ಟ್ರಾನ್ಸ್‌ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P4 ಪವರ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Motorola Edge 60 Pro ಸ್ಮಾರ್ಟ್‌ಫೋನ್ ಖರೀದಿಸಲು ಇದುವೇ ಬೆಸ್ಟ್ ಟೈಮ್! ಭಾರೀ ಡಿಸ್ಕೌಂಟ್
Realme P4 Power 5G ಬೆಲೆಯಲ್ಲಿ ಭಾರೀ ಕಡಿತ
ಇತ್ತೀಚಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ರಿಯಲ್‌ಮಿಯ ಈ ಫೋನ್ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ರಿಯಲ್‌ಮಿ P4 ಪವರ್ 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 32,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 29,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಟ್ರಾನ್ಸ್‌ಸಿಲ್ವರ್, ಟ್ರಾನ್ಸ್‌ಆರೆಂಜ್ ಮತ್ತು ಟ್ರಾನ್ಸ್‌ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ರಿಯಲ್‌ಮಿ P4 ಪವರ್ 5G ಫೀಚರ್ಸ್ ಮಾಹಿತಿ
ರಿಯಲ್‌ಮಿ P4 ಪವರ್ 5G ಫೋನ್ 6.8 ಇಂಚಿನ 1.5K 4D ಕರ್ವ್+ ಹೈಪರ್‌ಗ್ಲೋ ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 6,500 ನಿಟ್‌ಗಳ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ MediaTek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್ ಹೊಂದಿದ್ದು ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ ಯುಐ 7.0 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ರಿಯಲ್‌ಮಿ P4 ಪವರ್ 5G ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು ಇದರಲ್ಲಿ 50MP ಪ್ರಾಥಮಿಕ ಕ್ಯಾಮೆರಾವು ಸೋನಿ IMX882 ಜೊತೆಗೆ OIS ಸೌಲಭ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೇ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಇದು 4K/30fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ 10,001mAh ಸಿಲಿಕಾನ್ ಕಾರ್ಬನ್ ಟೈಟಾನ್ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
