ಇದೇ ಜೂನ್‌ 17 ರಂದು Realme P4R 5G ಮೊಬೈಲ್‌ ಫಸ್ಟ್‌ ಸೇಲ್‌! ಬೆಲೆ ನೋಡಿ

HIGHLIGHTS

ಜೂನ್‌ 17 ರಂದು ರಿಯಲ್‌ಮಿ P4R 5G ಮೊಬೈಲ್‌ ಸೇಲ್‌

ರಿಯಲ್‌ಮಿ P4R 5G ಫೋನ್‌ 45W ಚಾರ್ಜಿಂಗ್ ಸೌಲಭ್ಯ ಪಡೆದಿದೆ

ರಿಯಲ್‌ಮಿ P4R 5G ಮೊಬೈಲ್‌ 8,000mAh ಬ್ಯಾಟರಿ ಒಳಗೊಂಡಿದೆ

ಇದೇ ಜೂನ್‌ 17 ರಂದು Realme P4R 5G ಮೊಬೈಲ್‌ ಫಸ್ಟ್‌ ಸೇಲ್‌! ಬೆಲೆ ನೋಡಿ

ಜನಪ್ರಿಯ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ರಿಯಲ್‌ಮಿ ಕಂಪನಿಯು ಇತ್ತೀಚಿಗೆ ಭಾರತದಲ್ಲಿ ಹೊಸದಾಗಿ Realme P4R 5G ಹೆಸರಿನ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್‌ ಇದೇ ಜೂನ್‌ 17 ರಂದು ಮಾರಾಟ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 8,000mAh ಬ್ಯಾಟರಿ ಸಪೋರ್ಟ್‌ ಜೊತೆಗೆ 45W ಫಾಸ್ಟ್‌ ಚಾರ್ಜಿಂಗ್ ಪಡೆದಿರುವುದು ಪ್ಲಸ್ ಪಾಯಿಂಟ್‌ ಎನಿಸಿದೆ. ಹಾಗೆಯೇ ಇದು 50MP ಪ್ರಾಥಮಿಕ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ P4R 5G ಸ್ಮಾರ್ಟ್‌ಫೋನ್‌ ಸೇಲ್‌, ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 200MP ಕ್ಯಾಮೆರಾ ಒಳಗೊಂಡ Redmi Note 15 Pro 5G ಬೆಲೆಯಲ್ಲಿ ಸಖತ್‌ ಇಳಿಕೆ!

Realme P4R 5G ಸೇಲ್‌ ಮಾಹಿತಿ ಇಲ್ಲಿದೆ

ರಿಯಲ್‌ಮಿ ಕಂಪನಿಯ ನೂತನ ರಿಯಲ್‌ಮಿ P4R 5G ಮೊಬೈಲ್‌ ಮಾರುಕಟ್ಟೆಯಲ್ಲಿ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಇದೇ ಜೂನ್‌ 17 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಸೇಲ್‌ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 4GB + 128GB ಸ್ಟೋರೇಜ್‌ ವೇರಿಯಂಟ್‌ 18,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 6GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 20,999 ರೂ.ಗಳು ಆಗಿದೆ. ಹಾಗೆಯೇ 6GB + 256GB ಸ್ಟೋರೇಜ್‌ ವೇರಿಯಂಟ್‌ 22,999 ರೂ.ಗಳ ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದೆ. ಇನ್ನು ಈ ಫೋನ್‌ ಟೈಟಾನಿಯಂ ಗ್ಲೇರ್, ಸಿಲ್ವರ್ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

Realme P4R 5G

ರಿಯಲ್‌ಮಿ P4R 5G ಫೋನ್‌ ಫೀಚರ್ಸ್‌ ಹೀಗಿವೆ

ರಿಯಲ್‌ಮಿ P4R 5G ಮೊಬೈಲ್‌ 6.8 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಹಾಗೂ 6GB + 256GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ Realme UI 7.0 ಔಟ್ ಆಫ್ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP65 ರೇಟಿಂಗ್‌ ಸೌಲಭ್ಯ ಪಡೆದಿದೆ.

ರಿಯಲ್‌ಮಿ P4R 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile