ಬಹುನಿರೀಕ್ಷಿತ Realme P4R 5G ಸ್ಮಾರ್ಟ್‌ಫೋನ್ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಈ ನೂತನ ಸ್ಮಾರ್ಟ್‌ಫೋನ್ ನಾಳೆ (ಜೂನ್ 10 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಕುರಿತಾಗಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಪ್ರತ್ಯೇಕ ಮೈಕ್ರೋಪೇಜ್ ಅನ್ನು ಸಹ ತೆರೆಯಲಾಗಿದೆ. ಇನ್ನು ಮುಂಬರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಒಳಗೊಂಡಿರಲಿದೆ ಎನ್ನಲಾಗಿದೆ. ಇದರೊಂದಿಗೆ 8,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇದರೊಂದಿಗೆ ಈ ಮೊಬೈಲ್ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್ ಆಯ್ಕೆ ಹೊಂದಿರಲಿದೆ. ಹಾಗಾದರೆ ರಿಯಲ್‌ಮಿ P4R 5G ಮೊಬೈಲ್‌ನ ಹೊಸ ಅಪ್‌ಡೇಟ್ಸ್ ಹಾಗೂ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಇಂದು Lava Bold N2 5G ಸ್ಮಾರ್ಟ್‌ಫೋನ್ ಸೇಲ್ ಶುರು! 6,000mAh ಬ್ಯಾಟರಿ ಸಪೋರ್ಟ್
ರಿಯಯ್‌ಮಿ ಸಂಸ್ಥೆಯ ಮುಂಬರುವ ನೂತನ ರಿಯಲ್‌ಮಿ P4R 5G ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಜೂನ್ 10 ರಂದು) ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗುವುದು ಪಕ್ಕಾ ಆಗಿದೆ. ಇನ್ನು ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಇನ್ನು ಈ ಫೋನ್ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್ ಆಯ್ಕೆಯಲ್ಲಿ ಎಂಟ್ರಿ ನೀಡುವ ಸಾಧ್ಯತೆಗಳು ಇವೆ.
ರಿಯಲ್‌ಮಿ P4R 5G ಮೊಬೈಲ್ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಹಾಗೆಯೇ ಈ ಮೊಬೈಲ್ ಹಿಂಭಾಗದಲ್ಲಿ 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಇರಲಿದ್ದು ಅದರ ಜೊತೆಗೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಯಿದೆ. ಅಂದಹಾಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಹೊಂದಿರುವ ನಿರೀಕ್ಷೆಗಳು ಇವೆ.
ರಿಯಲ್‌ಮಿ P4R ಮೀಡ್‌ರೇಂಜ್ ಬಜೆಟ್ ಮಾದರಿಯ ಸ್ಮಾರ್ಟ್‌ಫೋನ್ ಆಗಿರಲಿದ್ದು ಇದು 4GB RAM ಹಾಗೂ 6GB RAM ಮತ್ತು 256GB ಹಾಗೂ 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆಯಬಹುದು. ಹಾಗೆಯೇ ಈ ಸ್ಮಾರ್ಟ್‌ಫೋನ್ 45W ವೇಗದ ಚಾರ್ಜಿಂಗ್ ಸಪೋರ್ಟ್ ಜೊತೆಗೆ 8,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆಯುವ ಸಾಧ್ಯತೆ ಇದೆ.