Realme P4R 5G ಮೊಬೈಲ್‌ ಲಾಂಚ್‌ಗೆ ದಿನಾಂಕ ನಿಗದಿ; 8,000mAh ಬ್ಯಾಟರಿ ಸೌಲಭ್ಯ

HIGHLIGHTS

ರಿಯಲ್‌ಮಿ P4R ಮೊಬೈಲ್‌ ಜೂನ್ 10 ರಂದು ಭಾರತದಲ್ಲಿ ಲಾಂಚ್

ರಿಯಲ್‌ಮಿಯ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ

ರಿಯಲ್‌ಮಿ P4R ಮೊಬೈಲ್‌ 8000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದೆ

ರಿಯಲ್‌ಮಿ ಕಂಪನಿಯು ಇದೀಗ ಹೊಸದಾಗಿ Realme P4R 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ನೂತನ ಸ್ಮಾರ್ಟ್‌ಫೋನ್‌ ಇದೇ ಜೂನ್ 10 ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಕುರಿತಾಗಿ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಪ್ರತ್ಯೇಕ ಮೈಕ್ರೋಪೇಜ್‌ ಅನ್ನು ಸಹ ತೆರೆಯಲಾಗಿದೆ. ಇನ್ನು ಮುಂಬರುವ ಈ ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 7400 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಒಳಗೊಂಡಿರಲಿದೆ ಎನ್ನಲಾಗಿದೆ. ಇದರೊಂದಿಗೆ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿರಲಿದೆ. ಇದರೊಂದಿಗೆ ಈ ಮೊಬೈಲ್‌ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್‌ ಆಯ್ಕೆ ಹೊಂದಿರಲಿದೆ. ಹಾಗಾದರೆ ರಿಯಲ್‌ಮಿ P4R ಮೊಬೈಲ್‌ನ ಹೊಸ ಅಪ್‌ಡೇಟ್ಸ್‌ ಹಾಗೂ ನಿರೀಕ್ಷಿತ ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ ಈ Postpaid ಯೋಜನೆಯಲ್ಲಿ 100GB ಡೇಟಾ ಜೊತೆಗೆ OTT ಸೌಲಭ್ಯ

Realme P4R 5G ಮೊಬೈಲ್‌ ಬಿಡುಗಡೆ ಮಾಹಿತಿ

ರಿಯಯ್‌ಮಿ ಕಂಪನಿಯ ಮುಂಬರುವ ನೂತನ ರಿಯಲ್‌ಮಿ P4R ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಅಂದಹಾಗೆ ಈ ಫೋನ್‌ ಇದೇ ಜೂನ್ 10 ರಂದು ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಇನ್ನು ಲಾಂಚ್ ಕುರಿತು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಇನ್ನು ಈ ಫೋನ್‌ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್‌ ಆಯ್ಕೆಯಲ್ಲಿ ಎಂಟ್ರಿ ನೀಡುವ ಸಾಧ್ಯತೆಗಳು ಇವೆ.

ರಿಯಲ್‌ಮಿ P4R ಮೊಬೈಲ್‌ನ ನಿರೀಕ್ಷಿತ ಫೀಚರ್ಸ್‌

ರಿಯಲ್‌ಮಿ P4R ಮೊಬೈಲ್‌ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್‌ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಹಾಗೆಯೇ ಈ ಮೊಬೈಲ್‌ ಹಿಂಭಾಗದಲ್ಲಿ 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಇರಲಿದ್ದು ಅದರ ಜೊತೆಗೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಯಿದೆ. ಅಂದಹಾಗೆ ಈ ಮೊಬೈಲ್‌ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಈ ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 7400 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿರುವ ನಿರೀಕ್ಷೆಗಳು ಇವೆ.

ರಿಯಲ್‌ಮಿ P4R ಮೀಡ್‌ರೇಂಜ್‌ ಬಜೆಟ್‌ ಮಾದರಿಯ ಸ್ಮಾರ್ಟ್‌ಫೋನ್‌ ಆಗಿರಲಿದ್ದು ಇದು 4GB RAM ಹಾಗೂ 6GB RAM ಮತ್ತು 256GB ಹಾಗೂ 128GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆಯಬಹುದು. ಹಾಗೆಯೇ ಈ ಸ್ಮಾರ್ಟ್‌ಫೋನ್ 45W ವೇಗದ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆಯುವ ಸಾಧ್ಯತೆ ಇದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :