ರಿಯಲ್‌ಮಿ ಕಂಪನಿಯು ಇತ್ತೀಚಿಗೆ ಭಾರತದಲ್ಲಿ ಹೊಸದಾಗಿ Realme P4R 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಮೋಡಿ ಮಾಡಿದೆ. ಈ ಸ್ಟೈಲಿಶ್ ಸ್ಮಾರ್ಟ್‌ಫೋನ್ ನಾಳೆ (ಜೂನ್ 17 ರಂದು) ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 8,000mAh ಬ್ಯಾಟರಿ ಸಪೋರ್ಟ್ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಪಡೆದಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗೆಯೇ ಇದು 50MP ಪ್ರಾಥಮಿಕ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ P4R 5G ಸ್ಮಾರ್ಟ್‌ಫೋನ್ ಸೇಲ್, ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : NEET ಮರುಪರೀಕ್ಷೆ ಹಿನ್ನೆಲೆ: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿರ್ಬಂಧ!
ನೂತನ ರಿಯಲ್‌ಮಿ P4R 5G ಫೋನ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್ ನಾಳೆ (ಜೂನ್ 17 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮೊದಲ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ 4GB + 128GB ಸ್ಟೋರೇಜ್ ವೇರಿಯಂಟ್ 18,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 20,999 ರೂ.ಗಳು ಆಗಿದೆ. ಹಾಗೆಯೇ 6GB + 256GB ಸ್ಟೋರೇಜ್ ವೇರಿಯಂಟ್ 22,999 ರೂ.ಗಳ ಪ್ರೈಸ್‌ಟ್ಯಾಗ್ ಅನ್ನು ಪಡೆದಿದೆ. ಇನ್ನು ಈ ಫೋನ್ ಟೈಟಾನಿಯಂ ಗ್ಲೇರ್, ಸಿಲ್ವರ್ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.
ರಿಯಲ್‌ಮಿ P4R 5G ಮೊಬೈಲ್ 6.8 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಹಾಗೂ 6GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ Realme UI 7.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP65 ರೇಟಿಂಗ್ ಸೌಲಭ್ಯ ಪಡೆದಿದೆ.
ರಿಯಲ್‌ಮಿ P4R 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇದರ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ.