Realme P4R 5G Price and specs leaked ahead of India launch
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ತನ್ನ P ಸರಣಿಯನ್ನು ಇದೀಗ ಭಾರತದಲ್ಲಿ ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ. ಇದರ ಭಾಗವಾಗಿ ಸಂಸ್ಥೆಯು ಹೊಸ Realme P4R 5G ಹೆಸರಿನ ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಲಾಂಚ್ ಮಾಡಲು ಸಕಲ ತಯಾರಿ ನಡೆಸುತ್ತಿದೆ. ಅಂದಹಾಗೆ ರಿಯಲ್‌ಮಿ P4R ಮೊಬೈಲ್ ಇದೇ ಶೀಘ್ರದಲ್ಲೇ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಇನ್ನು ಮುಂಬರುವ ಈ ಮೊಬೈಲ್ ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಇನ್ನು ಈ ಫೋನ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಪವರ್ ಹೊಂದಿರಲಿದೆ. ಹಾಗಾದರೆ ಮಾರುಕಟ್ಟೆಗೆ ಲಗ್ಗೆ ಇಡುವ ರಿಯಲ್‌ಮಿ P4R ಮೊಬೈಲ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸ್ಟೈಲಿಶ್ ಲುಕ್ ಇರುವ Poco M8 5G ಮೊಬೈಲ್ ದರದಲ್ಲಿ ಆಕರ್ಷಕ ಇಳಿಕೆ!
ರಿಯಲ್‌ಮಿ ಕಂಪನಿಯ ರಿಯಲ್‌ಮಿ P4R ಮೊಬೈಲ್ ಇದೇ ಶೀಘ್ರದಲ್ಲೇ ಅಧಿಕೃತವಾಗಿ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ಲೈವ್ ಮಾಡಲಾಗಿದೆ. ಅಲ್ಲದೇ ಲಾಂಚ್ ಬಳಿಕ ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಈ ಫೋನ್ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್ ಆಯ್ಕೆಯಲ್ಲಿ ಎಂಟ್ರಿ ನೀಡುವ ಸಾಧ್ಯತೆಗಳು ಇವೆ.
ರಿಯಲ್‌ಮಿ P4R ಮೊಬೈಲ್ ಸಿಲ್ವರ್ ಗ್ಲೇರ್, ಟೈಟಾನಿಯಂ ಗ್ಲೇರ್ ಮತ್ತು ಲ್ಯಾವೆಂಡರ್ ಗ್ಲೇರ್ ಕಲರ್ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಹಾಗೆಯೇ ಈ ಮೊಬೈಲ್ ಹಿಂಭಾಗದಲ್ಲಿ 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಇರಲಿದ್ದು ಅದರ ಜೊತೆಗೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಯಿದೆ. ಅಂದಹಾಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಹೊಂದಿರುವ ನಿರೀಕ್ಷೆಗಳು ಇವೆ.
ರಿಯಲ್‌ಮಿ P4R ಮೀಡ್‌ರೇಂಜ್ ಬಜೆಟ್ ಮಾದರಿಯ ಸ್ಮಾರ್ಟ್‌ಫೋನ್ ಆಗಿರಲಿದ್ದು ಇದು 4GB RAM ಹಾಗೂ 6GB RAM ಮತ್ತು 256GB ಹಾಗೂ 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆಯಬಹುದು. ಹಾಗೆಯೇ ಈ ಸ್ಮಾರ್ಟ್‌ಫೋನ್ 45W ವೇಗದ ಚಾರ್ಜಿಂಗ್ ಸಪೋರ್ಟ್ ಜೊತೆಗೆ 8,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆಯುವ ಸಾಧ್ಯತೆ ಇದೆ.