ಭಾರತದಲ್ಲಿ Realme P4s 5G ಮೊಬೈಲ್ ಬಿಡುಗಡೆ! ಬರೋಬ್ಬರಿ 8,000mAh ಬ್ಯಾಟರಿ ಸೌಲಭ್ಯ
ರಿಯಲ್‌ಮಿಯ ಈ ಫೋನ್ 8,000mAh ಬ್ಯಾಟರಿ ಪಡೆದುಕೊಂಡಿದೆ
ರಿಯಲ್‌ಮಿ P4s 5G ಸ್ಮಾರ್ಟ್‌ಫೋನ್ 50MP ಕ್ಯಾಮೆರಾ ಒಳಗೊಂಡಿದೆ
ಈ ಮೊಬೈಲ್ ಎಲೆಕ್ಟ್ರಿಕ್ ಸಯಾನ್ ಮತ್ತು ಟೈಟಾನಿಯಂ ಗ್ರೇ ಕಲರ್‌ನಲ್ಲಿ ಲಭ್ಯ
ರಿಯಲ್‌ಮಿ ಮೊಬೈಲ್ ಕಂಪನಿಯ ಬಹುನಿರೀಕ್ಷಿತ Realme P4s 5G ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 26 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 144Hz ರಿಫ್ರೆಶ್ ರೇಟ್ ಜೊತೆಗೆ 16MP ಸೆಲ್ಫಿ ಕ್ಯಾಮೆರಾ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಎಲೆಕ್ಟ್ರಿಕ್ ಸಯಾನ್ ಮತ್ತು ಟೈಟಾನಿಯಂ ಗ್ರೇ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ರಿಯಲ್‌ಮಿ P4s 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಜನಪ್ರಿಯ Samsung Galaxy A17 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
Realme P4s 5G ಮೊಬೈಲ್ ಬೆಲೆ ಹಾಗೂ ಲಭ್ಯತೆ
ರಿಯಲ್‌ಮಿ ಕಂಪನಿಯ ರಿಯಲ್‌ಮಿ P4s 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ 34,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 8GB RAM + 256GB ಸ್ಟೋರೇಜ್ ವೇರಿಯಂಟ್ 37,999 ರೂ.ಗಳ ಬೆಲೆ ಪಡೆದುಕೊಂಡಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್ 41,999 ರೂ.ಗಳ ಬೆಲೆಯನ್ನು ಒಳಗೊಂಡಿದೆ. ಈ ಫೋನ್ ಎಲೆಕ್ಟ್ರಿಕ್ ಸಯಾನ್ ಮತ್ತು ಟೈಟಾನಿಯಂ ಗ್ರೇ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಸೆಪ್ಟೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟಕ್ಕೆ ಬರಲಿದೆ.

ರಿಯಲ್‌ಮಿ P4s 5G ಮೊಬೈಲ್ ಫೀಚರ್ಸ್
ರಿಯಲ್‌ಮಿ P4s 5G ಮೊಬೈಲ್ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 1,272 x 2,772 ಪಿಕ್ಸಲ್ ರೆಸಲ್ಯೂಶನ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಮೂರು ಭಿನ್ನ ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್ IP66 + IP68 + IP69 ರೇಟಿಂಗ್ ಸೌಲಭ್ಯವನ್ನು ಹೊಂದಿದೆ.
ಹಾಗೆಯೇ ರಿಯಲ್‌ಮಿ P4s 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಬಲವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 8,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.4, USB ಟೈಪ್-ಸಿ ಪೋರ್ಟ್ ಸಪೋರ್ಟ್ ಮಾಡುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
