8,000mAh ಬ್ಯಾಟರಿ ಸೌಲಭ್ಯ ಇರುವ Realme P4s 5G ಮೊಬೈಲ್‌ ಖರೀದಿಗೆ ಈ ಆಫರ್‌ ಉತ್ತಮ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ಮಿ P4s 5G ಫೋನಿಗೆ ಆಕರ್ಷಕ ಆಫರ್‌

ರಿಯಲ್‌ಮಿ P4s 5G ಮೊಬೈಲ್‌ 8,000mAh ಬ್ಯಾಟರಿ ಸೌಲಭ್ಯ ಹೊಂದಿದೆ

ರಿಯಲ್‌ಮಿ P4s 5G ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಬಣ್ಣಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme P4s 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P4s 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Realme P4s 5G ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ಮೀಡ್‌ರೇಂಜ್‌ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ P4s 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 48,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 33,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಎಲೆಕ್ಟ್ರಿಕ್ ಸಯಾನ್ ಮತ್ತು ಟೈಟಾನಿಯಂ ಗ್ರೇ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ರಿಯಲ್‌ಮಿ P4s 5G ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ P4s 5G ಮೊಬೈಲ್‌ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 1,272 x 2,772 ಪಿಕ್ಸಲ್ ರೆಸಲ್ಯೂಶನ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ಮೂರು ಭಿನ್ನ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್‌ IP66 + IP68 + IP69 ರೇಟಿಂಗ್‌ ಸೌಲಭ್ಯವನ್ನು ಹೊಂದಿದೆ.

ಹಾಗೆಯೇ ರಿಯಲ್‌ಮಿ P4s 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಬಲವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 8,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 80W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.4, USB ಟೈಪ್-ಸಿ ಪೋರ್ಟ್ ಸಪೋರ್ಟ್‌ ಮಾಡುತ್ತದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile