ಹೊಸ Realme P4s ಮೊಬೈಲ್ ಬಿಡುಗಡೆಗೆ ದಿನಾಂಕ ಫಿಕ್ಸ್! 8,000mAh ಬ್ಯಾಟರಿ ಸೌಲಭ್ಯ
ಆಗಷ್ಟ್ 26 ರಂದು ರಿಯಲ್‌ಮಿ P4s ಮೊಬೈಲ್ ಲಾಂಚ್
ರಿಯಲ್‌ಮಿ P4s ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ
ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಪ್ರೊಸೆಸರ್ ಪಡೆದಿರಲಿದೆ
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ಇದೀಗ ಹೊಸದಾಗಿ Realme P4s ಮೊಬೈಲ್ ಅನ್ನು ಅದೇ ಆಗಷ್ಟ್ 26 ರಂದು ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ತಯಾರಾಗಿದೆ. ಈ ಮೊಬೈಲ್ ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಹೊಸದಾಗಿ ಲಗ್ಗೆ ಇಡಲಿರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಇನ್ನು ಈ ಮೊಬೈಲ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಖಚಿತ ಆಗಿದೆ. ಹಾಗಾದರೆ ರಿಯಲ್‌ಮಿ P4s ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Moto G Max ಮೊಬೈಲ್‌ನ ಫಸ್ಟ್ ಸೇಲ್ ನಾಳೆ ಪ್ರಾರಂಭ; ಜಬರ್ದಸ್ತ್ ಫೀಚರ್ಸ್
Realme P4s ಲಾಂಚ್‌ಗೆ ಡೇಟ್ ಫಿಕ್ಸ್
ರಿಯಲ್‌ಮಿ ಕಂಪನಿಯು ತನ್ನ ಹೊಸ ರಿಯಲ್‌ಮಿ P4s ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಫೋನ್ ಇದೇ ಆಗಷ್ಟ್ 26 ರಂದು ಮಧ್ಯಾಹ್ನ 12 ಗಂಟೆಗೆ ಲಾಂಚ್ ಆಗಲಿದೆ. ಈಗಾಗಲೇ ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್‌ಗಾಗಿ ವಿಶೇಷ ಮೈಕ್ರೋಸೈಟ್ ಲೈವ್ ಆಗಿದ್ದು, ಬಿಡುಗಡೆಯ ನಂತರ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಹಾಗೂ ರಿಯಲ್‌ಮಿ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಾಗಲಿವೆ ಎಂದು ಕಂಪನಿ ದೃಢಪಡಿಸಿದೆ. ಇನ್ನು ಈ ಫೋನ್‌ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿರಬಹುದು ಎನ್ನಲಾಗಿದೆ. ಹಾಗೆಯೇ ಇದು ಎರಡು ಆಕರ್ಷಕ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.

ರಿಯಲ್‌ಮಿ P4s ಫೋನಿನ ನಿರೀಕ್ಷಿತ ಫೀಚರ್ಸ್ ಮಾಹಿತಿ
ಮುಂಬರುವ ರಿಯಲ್‌ಮಿ P4s ಫೋನ್ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಜೊತೆಗೆ 6,500 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ ಹೈಪರ್‌ವಿಷನ್+ AI ಚಿಪ್ ಸಪೋರ್ಟ್ ಪಡೆದಿರುವ ಸಾಧ್ಯತೆಗಳು ಇವೆ.
ರಿಯಲ್‌ಮಿ P4s ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ನಲ್ಲಿ ಇರಬಹುದು. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಇನ್ನು ಈ ಮೊಬೈಲ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರಲಿದೆ. ಹಾಗೆಯೇ ಧೂಳು ಮತ್ತು ನೀರು ನಿರೋಧಕ್ಕಾಗಿ ಇದು IP66, IP68 ಮತ್ತು IP69 ರೇಟಿಂಗ್ ಸೌಲಭ್ಯ ಹೊಂದಿರಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
