ರಿಯಲ್‌ಮಿ ಕಂಪನಿಯ Realme P4x 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಆಕರ್ಷಕ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P4x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Google Pixel 9a ಮೊಬೈಲ್ ಖರೀದಿಸಲು ಇದುವೇ ಬೆಸ್ಟ್ ಟೈಮ್! ಭರ್ಜರಿ ಆಫರ್ ಲಭ್ಯ
ಬಜೆಟ್ ಬೆಲೆಯ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ P4x 5G ಸ್ಮಾರ್ಟ್‌ಫೋನ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 38,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 20,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಬ್ಯಾಂಕ್ ಆಫರ್ ಹಾಗೂ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ರಿಯಲ್‌ಮಿ P4x 5G ಮೊಬೈಲ್ 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.72 ಇಂಚಿನ LCD ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 1000 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080×2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 6GB + 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ P4x 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 7000mAh ಬ್ಯಾಟರಿ ಸೌಲಭ್ಯದ ಜೊತೆಗೆ 45W ಅಲ್ಟ್ರಾ ಚಾರ್ಜ್ ಪಡೆದಿದೆ.