ಅಗ್ಗದ ಬೆಲೆಯಲ್ಲಿ ಗಮನ ಸೆಳೆದ Redmi 15A ಮೊಬೈಲ್‌ ದರದಲ್ಲಿ ಇದೀಗ ಭರ್ಜರಿ ಇಳಿಕೆ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ 15A ಫೋನಿಗೆ ಆಕರ್ಷಕ ಆಫರ್‌

ರೆಡ್ಮಿ 15A ಮೊಬೈಲ್‌ 6,500mAh ಬ್ಯಾಟರಿ ಸೌಲಭ್ಯ ಹೊಂದಿದೆ

ರೆಡ್ಮಿ 15A ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi 15A ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಆಕ್ಟಾ ಕೋರ್ T8300 5G SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ 15A ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಡಿಸ್ಕೌಂಟ್‌ ಬೆಲೆಯಲ್ಲಿ Oppo K14x ಮೊಬೈಲ್‌ ಖರೀದಿ ಮಾಡಲು ಇದು ಸೂಕ್ತ ಸಮಯ!

Redmi 15A ಈಗ ಆಫರ್‌ನಲ್ಲಿ ಲಭ್ಯ

ಬಜೆಟ್‌ ದರ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ 15A ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 27,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 16,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಏಸ್‌ ಬ್ಲ್ಯಾಕ್‌, ಅಮೇಜ್ ಪರ್ಪಲ್, Awesome ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ರೆಡ್ಮಿ 15A ಮೊಬೈಲ್‌ ಫೀಚರ್ಸ್‌ ಹೀಗಿವೆ

ರೆಡ್ಮಿ 15A ಮೊಬೈಲ್‌ 6.6.9 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 60Hz, 90Hz ಮತ್ತು 120Hz ನಡುವಿನ ರಿಫ್ರೆಶ್ ರೇಟ್‌ ಮತ್ತು 800 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ HyperOS 3 ಬೆಂಬಲಿತ ಆಂಡ್ರಾಯ್ಡ್ 16 ಓಎಸ್‌ ಜೊತೆಗೆ ಆಕ್ಟಾ ಕೋರ್ T8300 5G SoC ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೋ SD ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸಬಹುದಾದ ಆಯ್ಕೆ ಪಡೆದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ ಈ ಫೋನ್‌ IP52 ರೇಟಿಂಗ್ ಪಡೆದುಕೊಂಡಿದೆ.

ಹಾಗೆಯೇ ರೆಡ್ಮಿ 15A ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 32MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಪವರ್‌ನಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ ಜೊತೆಗೆ 15W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಹಾಗೆಯೇ 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.‌

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :