ಬಜೆಟ್‌ ಬೆಲೆಯಲ್ಲಿ Redmi 15A ಸ್ಮಾರ್ಟ್‌ಫೋನ್‌ ಲಾಂಚ್! ಬಿಗ್ ಬ್ಯಾಟರಿ ಸೌಲಭ್ಯ

HIGHLIGHTS

ರೆಡ್ಮಿ 15A ಮೊಬೈಲ್‌ 32MP ಕ್ಯಾಮೆರಾ ರಚನೆ ಹೊಂದಿದೆ

ರೆಡ್ಮಿ 15A ಫೋನ್ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ

ರೆಡ್ಮಿ ಕಂಪನಿಯ ಈ ಹೊಸ ಫೋನ್‌ ನಾಲ್ಕು ಆಕರ್ಷಕ ಕಲರ್‌ ಆಯ್ಕೆ ಪಡೆದುಕೊಂಡಿದೆ.

ಬಜೆಟ್‌ ಬೆಲೆಯಲ್ಲಿ Redmi 15A ಸ್ಮಾರ್ಟ್‌ಫೋನ್‌ ಲಾಂಚ್! ಬಿಗ್ ಬ್ಯಾಟರಿ ಸೌಲಭ್ಯ

Redmi ಸಂಸ್ಥೆಯು ಹೊಸದಾಗಿ Redmi 15A ಮೊಬೈಲ್‌ ಅನ್ನು ಇಂದು (ಮಾರ್ಚ್‌ 27 ರಂದು) ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಮೊಬೈಲ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಅನ್ನು ಒಳಗೊಂಡಿದೆ. ಅಲ್ಲದೇ ಈ ಹೊಸ ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ ಇದಕ್ಕೆ ಪೂರಕವಾಗಿ 45W ಚಾರ್ಜಿಂಗ್ ವ್ಯವಸ್ಥೆ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ ಫ್ಯಾಂಟಸಿ ಪರ್ಪಲ್, ಮಿಂಟ್ ಗ್ರೀನ್, ಇಂಕ್ ಬ್ಲ್ಯಾಕ್ ಮತ್ತು ಷಾಂಪೇನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆ ಪ್ರವೇಶಿಸಿದೆ. ಇದರೊಂದಿಗೆ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಹಾಗಾದರೆ ರೆಡ್ಮಿ 15A ಮೊಬೈಲ್‌ನ ಇತರೆ ಬೆಲೆ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : ಮಾರುಕಟ್ಟೆಗೆ ಬಂದೇ ಬಿಡ್ತು Tecno Spark 50 5G ಸ್ಮಾರ್ಟ್‌ಫೋನ್‌! ಜಬರ್ದಸ್ತ್‌ ಬ್ಯಾಟರಿ ಸೌಲಭ್ಯ

Redmi 15A ಮೊಬೈಲ್ ಬೆಲೆ ಹಾಗೂ ಲಭ್ಯತೆ

ದೇಶಿಯ ಮೊಬೈಲ್‌ ಮಾರುಕಟ್ಟೆ ಪ್ರವೇಶಿಸಿರುವ ರೆಡ್ಮಿ 15A ಮೊಬೈಲ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಹೊಂದಿದ್ದು ಈ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ರೆಡ್ಮಿ 15A ಮೊಬೈಲ್‌ನ ಆರಂಭಿಕ 4GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 16,999 ರೂ.ಗಳು ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 18,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಫ್ಯಾಂಟಸಿ ಪರ್ಪಲ್, ಮಿಂಟ್ ಗ್ರೀನ್, ಇಂಕ್ ಬ್ಲ್ಯಾಕ್ ಮತ್ತು ಷಾಂಪೇನ್ ಗೋಲ್ಡ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Redmi 15A

ರೆಡ್ಮಿ 15A ಮೊಬೈಲ್‌ ಫೀಚರ್ಸ್‌ ಹೀಗಿವೆ

ಹೊಸ ರೆಡ್ಮಿ 15A ಮೊಬೈಲ್‌ 6.6.9 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 60Hz, 90Hz ಮತ್ತು 120Hz ನಡುವಿನ ರಿಫ್ರೆಶ್ ರೇಟ್‌ ಮತ್ತು 800 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ HyperOS 3 ಬೆಂಬಲಿತ ಆಂಡ್ರಾಯ್ಡ್ 16 ಓಎಸ್‌ ಜೊತೆಗೆ ಆಕ್ಟಾ ಕೋರ್ T8300 5G SoC ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೋ SD ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸಬಹುದಾದ ಆಯ್ಕೆ ಪಡೆದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ ಈ ಫೋನ್‌ IP52 ರೇಟಿಂಗ್ ಪಡೆದುಕೊಂಡಿದೆ.

ಹಾಗೆಯೇ ರೆಡ್ಮಿ 15A ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 32MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಪವರ್‌ನಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 6500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ ಜೊತೆಗೆ 15W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಹಾಗೆಯೇ 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.‌

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo