Redmi 15C 5G Launched in India
ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ರೆಡ್ಮಿ (Redmi) ಭಾರತದಲ್ಲಿ ಇಂದು ತನ್ನ ಹೊಚ್ಚ ಹೊಸ Redmi 15C 5G ಸ್ಮಾರ್ಟ್‌ಫೋನ್ ಅನ್ನು ಅಧಿಕೃತವಾಗಿ ಬಿಡುಗಡೆಯಾಗಿದೆ. ಕಂಪನಿ ಪ್ರಸ್ತುತ ಇದನ್ನು ಕೈಗೆಟಕುವ ಬೆಲೆಗೆ ಇಂಟ್ರೆಸ್ಟಿಂಗ್ ಮತ್ತು ಡಿಸೆಂಟ್ ಫೀಚರ್ಗಳೊಂದಿಗೆ ಪ್ಯಾಕ್ ಮಾಡಿ ಪರಿಚಯಿಸಿದೆ. ಈ ಸ್ಮಾರ್ಟ್ಫೋನ್ 6000mAh ಬ್ಯಾಟರಿ ಮತ್ತು 50MP AI ಡ್ಯೂಯಲ್ ಕ್ಯಾಮೆರಾದೊಂದಿಗೆ ಸುಮಾರು 12,499 ರೂಗಳಿಗೆ ಬಿಡುಗಡೆಯಗೊಳಿಸಿದ್ದು Redmi 15C 5G ಸ್ಮಾರ್ಟ್ಫೋನ್ ಮೊದಲ ಮಾರಾಟ ಮತ್ತು ಫೀಚರ್ಗಳೊಂದಿಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪಡೆಯಬಹುದು.
ಈ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆಯ ಬಗ್ಗೆ ಮಾತನಾಡುವುದದರೆ ಇದು ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹14,499 ರೂಗಳಿಗೆ ಮತ್ತು ಇದರ ಮತ್ತೊಂದು 6GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹13,999 ರೂಗಳಿಗೆ ಮತ್ತು ಕೊನೆಯದಾಗಿ ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹15,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಈ Redmi 15C 5G ಸ್ಮಾರ್ಟ್‌ಫೋನ್ 11ನೇ ಡಿಸೆಂಬರ್ 2025 ರಂದು ಅಮೆಜಾನ್, mi. com ಮತ್ತು ರೆಡ್ಮಿಯ ಸೈಟ್ ಮೂಲಕ ಮೊದಲ ಮಾರಾಟಕ್ಕೆ ಲಭ್ಯವಾಗಲಿದೆ.
Redmi 15C 5G ಸ್ಮಾರ್ಟ್ಫೋನ್ 6.9 ಇಂಚಿನ HD+ AMOLED (1600×720 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಹೊಂದಿದೆ. Redmi 15C 5G ಫೋನ್ ಕಾಮೆರದಲ್ಲಿ 50MP AI ಸೆನ್ಸರ್ ಹೊಂದಿದ್ದು ಇದರ AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
Also Read: Recharge Plan: ಏರ್ಟೆಲ್ ಮತ್ತು ಜಿಯೋದ ಸುಮಾರು 200 ರೂಗಳ ಬೆಸ್ಟ್ ರಿಚಾರ್ಜ್ ಪ್ಲಾನ್ ಯಾವುದು?
Redmi 15C 5G ಫೋನ್ MediaTek Dimensity 6300 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Side Fingerprint Scanner, IR Blaster (TBC), Ambient Light Sensor, Proximity Sensor (Virtual), E Compass ಮತ್ತು Accelerometer ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ Redmi 15C 5G ಸ್ಮಾರ್ಟ್ಫೋನ್ 6000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಕಂಪನಿ ಇದರಲ್ಲಿ 2 ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು 4 ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.