ಬಜೆಟ್‌ ದರದ Redmi 15C 5G ಮೊಬೈಲ್‌ ಈಗ ಮತ್ತಷ್ಟು ಸಸ್ತಾ ಬೆಲೆಯಲ್ಲಿ ಖರೀದಿಗೆ ಲಭ್ಯ!

HIGHLIGHTS

ರೆಡ್ಮಿ 15C 5G ಫೋನಿಗೆ ಅಮೆಜಾನ್‌ನಲ್ಲಿ ಆಫರ್‌ ಲಭ್ಯ

ರೆಡ್ಮಿ 15C 5G ಮೊಬೈಲ್‌ 6,000mAh ಬ್ಯಾಟರಿ ಪಡೆದಿದೆ

ರೆಡ್ಮಿ 15C 5G ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ನಲ್ಲಿ ಲಭ್ಯ

ದಸರಾ ಹಬ್ಬದ ಪ್ರಯುಕ್ತ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi 15C 5G ಮೊಬೈಲ್‌ ಬೊಂಬಾಟ್‌ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ 15C 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಆಪಲ್‌ನ ಮಡಚುವ iPhone Duo ಮೊಬೈಲ್ ಈಗ ಪ್ರಿ-ಆರ್ಡರ್‌ಗೆ ಲಭ್ಯ; ಬೆಲೆ ಹಾಗೂ ಫೀಚರ್ಸ್‌ ನೋಡಿ

Redmi 15C 5G ಫೋನಿಗೆ ವಿಶೇಷ ಆಫರ್‌

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ 15C 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 29,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 15,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಮೂನ್‌ ಲೈಟ್‌ ಬ್ಲೂ, ಡಾರ್ಕ್‌ ಪರ್ಪಲ್‌ ಮತ್ತು ಮಿಡ್‌ನೈಟ್‌ ಬ್ಲ್ಯಾಕ್‌ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರೆಡ್ಮಿ 15C 5G ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Redmi 15C 5G

ರೆಡ್ಮಿ 15C 5G ಫೀಚರ್ಸ್‌ ಮಾಹಿತಿ

ರೆಡ್ಮಿ 15C 5G ಮೊಬೈಲ್ 6.9 ಇಂಚಿನ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 1600 × 720 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ.

ರೆಡ್ಮಿ 15C 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP AI ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 33W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :