ಬಜೆಟ್‌ ಬೆಲೆಯ Redmi 15C 5G ಮೊಬೈಲ್‌ ಈಗ ಬೆಸ್ಟ್ ಆಫರ್‌ನಲ್ಲಿ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ 15C 5G ಬೆಲೆಯಲ್ಲಿ ಭಾರೀ ಇಳಿಕೆ

ರೆಡ್ಮಿ 15C 5G ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ

ರೆಡ್ಮಿ 15C 5G ಮೊಬೈಲ್‌ ಮೂರು ಆಕರ್ಷಕ ಕಲರ್‌ ಆಯ್ಕೆಗಳನ್ನು ಪಡೆದಿದೆ

ಬಜೆಟ್‌ ಬೆಲೆಯ Redmi 15C 5G ಮೊಬೈಲ್‌ ಈಗ ಬೆಸ್ಟ್ ಆಫರ್‌ನಲ್ಲಿ ಲಭ್ಯ!

Redmi 15C 5G ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಲುಕ್‌ ಜೊತೆಗೆ ಬಜೆಟ್‌ ದರದ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ಇದೀಗ ರೆಡ್ಮಿ 15C 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಘೋಷಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಶಿಯೋಮಿ ಸಂಸ್ಥೆಯ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ 15C 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಟೆಲಿಕಾಂನ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್‌ ಪ್ಲಾನ್‌ ಮಾಹಿತಿ ಇಲ್ಲಿದೆ ನೋಡಿ!

Redmi 15C 5G ದರದಲ್ಲಿ ಸಖತ್ ಇಳಿಕೆ

ರೆಡ್ಮಿ ಕಂಪನಿಯ ರೆಡ್ಮಿ 15C 5G ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 4GB + 128GB ವೇರಿಯಂಟ್‌ ಬೆಲೆ 15,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 14,788 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಮೂನ್‌ ಲೈಟ್‌ ಬ್ಲೂ, ಡಾರ್ಕ್‌ ಪರ್ಪಲ್‌ ಮತ್ತು ಮಿಡ್‌ನೈಟ್‌ ಬ್ಲ್ಯಾಕ್‌ ಕಲರ್‌ ಆಗಿವೆ.

Redmi 15C 5G

ರೆಡ್ಮಿ 15C 5G ಫೀಚರ್ಸ್‌ ಮಾಹಿತಿ

ರೆಡ್ಮಿ 15C 5G ಮೊಬೈಲ್ 6.9 ಇಂಚಿನ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 1600 × 720 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ.

ರೆಡ್ಮಿ 15C 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP AI ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 33W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo