ಸ್ಟೈಲಿಶ್‌ ಡಿಸೈನ್‌ ಇರುವ Redmi 15C ಮೊಬೈಲ್‌ ಬೆಲೆಯಲ್ಲಿ ಈಗ ಬಿಗ್‌ ಡಿಸ್ಕೌಂಟ್‌!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ 15C ಫೋನ್‌ ಡಿಸ್ಕೌಂಟ್‌ನಲ್ಲಿ ಲಭ್ಯ

ರೆಡ್ಮಿ 15C ಮೊಬೈಲ್‌ ಮೊದಲ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ

ರೆಡ್ಮಿ 15C ಫೋನ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ

ಮೊಬೈಲ್‌ ಮಾರುಕಟ್ಟೆಯಲ್ಲಿ ಬಜೆಟ್‌ ದರದ ಮೊಬೈಲ್‌ಗಳಿಗೆ ಡಿಮ್ಯಾಂಟ್‌ ಜಾಸ್ತಿ. ಆ ಪೈಕಿ ರೆಡ್ಮಿ ಸಂಸ್ಥೆಯ Redmi 15C ಸ್ಮಾರ್ಟ್‌ಫೋನ್‌ ಬಜೆಟ್‌ ದರದಲ್ಲಿ ಸದ್ದು ಮಾಡಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸಖತ್ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಆಯ್ದ ಬ್ಯಾಂಕ್‌ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ. ಅಂದಹಾಗೆ ಶಿಯೋಮಿ ಸಂಸ್ಥೆಯ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಒಳಗೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ 15C ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : LPG, PAN ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, UPI ಬಳಕೆಯಲ್ಲಿ ನಾಳೆಯಿಂದ ಹೊಸ ನಿಯಮಗಳು!

Redmi 15C ಮೊಬೈಲ್‌ ಡಿಸ್ಕೌಂಟ್‌ನಲ್ಲಿ ಲಭ್ಯ

ರೆಡ್ಮಿ ಕಂಪನಿಯ ರೆಡ್ಮಿ 15C ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 6GB + 128GB ವೇರಿಯಂಟ್‌ ಬೆಲೆ 31,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 16,998ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಮೂನ್‌ ಲೈಟ್‌ ಬ್ಲೂ, ಡಾರ್ಕ್‌ ಪರ್ಪಲ್‌ ಮತ್ತು ಮಿಡ್‌ನೈಟ್‌ ಬ್ಲ್ಯಾಕ್‌ ಕಲರ್‌ ಆಗಿವೆ.

ರೆಡ್ಮಿ 15C ಫೀಚರ್ಸ್‌ ಮಾಹಿತಿ

ರೆಡ್ಮಿ 15C ಸ್ಮಾರ್ಟ್‌ಫೋನ್‌ 6.9 ಇಂಚಿನ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 1600 × 720 ಪಿಕ್ಸಲ್‌ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ.

ರೆಡ್ಮಿ 15C ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP AI ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 33W ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಸಹ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :