6,000mAh ಬ್ಯಾಟರಿ ಇರುವ Redmi 15C ಮೊಬೈಲ್‌ ಬೆಲೆಯಲ್ಲಿ ಈಗ ಬೊಂಬಾಟ್‌ ಇಳಿಕೆ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ 15C ಫೋನ್‌ಗೆ ಬಿಗ್ ಡಿಸ್ಕೌಂಟ್‌

ರೆಡ್ಮಿ 15C ಮೊಬೈಲ್‌ 6,000mAh ಬ್ಯಾಟರಿ ಸಪೋರ್ಟ್ ಪಡೆದಿದೆ

ರೆಡ್ಮಿಯ ಈ ಫೋನ್‌ Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ರೆಡ್ಮಿ ಕಂಪನಿಯ ಜನಪ್ರಿಯ ಮೊಬೈಲ್‌ಗಳಲ್ಲಿ ಒಂದಾದ Redmi 15C ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಮೂನ್‌ ಲೈಟ್‌ ಬ್ಲೂ, ಡಾರ್ಕ್‌ ಪರ್ಪಲ್‌ ಮತ್ತು ಮಿಡ್‌ನೈಟ್‌ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ 15C ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ 629 ರೂ.ಗಳ ಪ್ಲಾನಿನಲ್ಲಿ ಸಖತ್ ಪ್ರಯೋಜನ! ಓಟಿಟಿ, ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ

Redmi 15C ಬೆಲೆಯಲ್ಲಿ ಈಗ ಇಳಿಕೆ

ಆಕರ್ಷಕ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ 15C ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 19,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 19,900 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್‌ ಮೂನ್‌ ಲೈಟ್‌ ಬ್ಲೂ, ಡಾರ್ಕ್‌ ಪರ್ಪಲ್‌ ಮತ್ತು ಮಿಡ್‌ನೈಟ್‌ ಬ್ಲ್ಯಾಕ್‌ ಕಲರ್‌ ಆಯ್ಕೆ ಹೊಂದಿದೆ.

ರೆಡ್ಮಿ 15C ಮೊಬೈಲ್‌ ಫೀಚರ್ಸ್‌ ಮಾಹಿತಿ

ರೆಡ್ಮಿ 15C ಸ್ಮಾರ್ಟ್‌ಫೋನ್‌ 6.9 ಇಂಚಿನ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 1600 × 720 ಪಿಕ್ಸಲ್‌ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ.

ರೆಡ್ಮಿ 15C ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP AI ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 33W ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಸಹ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :