Xiaomi launched Redmi 17 5G in India Price sale features and specs
ಲೀಡಿಂಗ್ ಮೊಬೈಲ್ ಬ್ರಾಂಡ್ ರೆಡ್ಮಿಯ ಇತ್ತೀಚಿನ Redmi 17 5G ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಹಾಗೂ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಇಂದು (ಸೆಪ್ಟೆಂಬರ್ 10 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಅಮೆಜಾನ್ ಮೂಲಕ ಮೊದಲ ಸೇಲ್ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 5 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ 7,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರೆಡ್ಮಿ 17 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : iPhone 18 Pro ಬಿಡುಗಡೆಯ ಬೆನ್ನಲ್ಲೇ ಶಾಕ್ ಕೊಟ್ಟ ಆಪಲ್! ದಿಢೀರ್ iPhone 17 ಬೆಲೆ ಭಾರಿ ಏರಿಕೆ
ಬಜೆಟ್ ಬೆಲೆಯಲ್ಲಿ ನೂತನವಾಗಿ ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ರೆಡ್ಮಿ 17 5G ಮೊಬೈಲ್ ಇಂದು (ಸೆಪ್ಟೆಂಬರ್ 10 ರಿಂದ) ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್ ವೇರಿಯಂಟ್ 23,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ವೇರಿಯಂಟ್ 26,999 ರೂ.ಗಳ ಬೆಲೆ ಪಡೆದುಕೊಂಡಿದೆ. ಈ ಫೋನ್ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್ ಆಯ್ಕೆ ಪಡೆದುಕೊಂಡಿದೆ. ಈ ಫೋನ್ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್ ಆಯ್ಕೆ ಪಡೆದುಕೊಂಡಿದೆ.
ರೆಡ್ಮಿ 17 5G ಮೊಬೈಲ್ 6.9 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 825 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್‌ನ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಎರಡು ಭಿನ್ನ ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ಆಧಾರಿತ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ರೆಡ್ಮಿ 17 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,900mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಪಡೆದಿದೆ.