ಸದ್ದಿಲ್ಲದೆ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Redmi 17 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ನೋಡಿ

HIGHLIGHTS

ರೆಡ್ಮಿ 17 5G ಫೋನ್‌ 7,900mAh ಬ್ಯಾಟರಿ ಪಡೆದುಕೊಂಡಿದೆ

ರೆಡ್ಮಿ 17 5G ಸ್ಮಾರ್ಟ್‌ಫೋನ್‌ 50MP ಕ್ಯಾಮೆರಾ ಒಳಗೊಂಡಿದೆ

ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆ ಪಡೆದಿದೆ

ಸದ್ದಿಲ್ಲದೆ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Redmi 17 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ನೋಡಿ

ಜನಪ್ರಿಯ ರೆಡ್ಮಿ ಮೊಬೈಲ್‌ ಕಂಪನಿಯು ಹೊಸದಾಗಿ Redmi 17 5G ಸ್ಮಾರ್ಟ್‌ಫೋನ್‌ ಅನ್ನು ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಹೊಸ ಮೊಬೈಲ್‌ MediaTek Dimensity 7500 Turbo ಚಿಪ್‌ಸೆಟ್ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 7,900mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ರೆಡ್ಮಿ 17 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Meta Muse Voice Transcribe ಬಿಡುಗಡೆ: 70ಕ್ಕೂ ಹೆಚ್ಚು ಭಾಷೆಗಳಲ್ಲಿ ತರಬೇತಿ, ಕನ್ನಡಕ್ಕೂ ಬೆಂಬಲ

Redmi 17 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ರೆಡ್ಮಿ ಕಂಪನಿಯ ರೆಡ್ಮಿ 17 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ 39,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ವೇರಿಯಂಟ್‌ 41,999 ರೂ.ಗಳ ಬೆಲೆ ಪಡೆದುಕೊಂಡಿದೆ. ಈ ಫೋನ್‌ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 10 ರಂದು ಅಮೆಜಾನ್ ಮತ್ತು ಶಿಯೋಮಿ ಆನ್‌ಲೈನ್ ಸ್ಟೋರ್ ಮೂಲಕ ಭಾರತದಲ್ಲಿ ಮಾರಾಟಕ್ಕೆ ಬರಲಿದೆ.

Redmi 17 5G Goes Official in India With Snapdragon 4 Gen 5 Chipset Price Specs

ರೆಡ್ಮಿ 17 5G ಮೊಬೈಲ್‌ ಫೀಚರ್ಸ್‌

ರೆಡ್ಮಿ 17 5G ಮೊಬೈಲ್‌ 6.9 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 825 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಕ್ವಾಲ್ಕಾಮ್‌ನ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 5 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ಎರಡು ಭಿನ್ನ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ಆಧಾರಿತ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ ರೆಡ್ಮಿ 17 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,900mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP64 ರೇಟಿಂಗ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile