ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi 17 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್ಡ್ರಾಗನ್ 4 Gen 5 ಚಿಪ್ಸೆಟ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,900mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ರೆಡ್ಮಿ 17 5G ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 12GB RAM ಸೌಲಭ್ಯ ಇರುವ Motorola Edge 60 Fusion 5G ಮೊಬೈಲ್ಗೆ ಈಗ ಬಿಗ್ ಡಿಸ್ಕೌಂಟ್!
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ 17 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ 23,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರೆಡ್ಮಿ 17 5G ಸ್ಮಾರ್ಟ್ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ರೆಡ್ಮಿ 17 5G ಮೊಬೈಲ್ 6.9 ಇಂಚಿನ HD+ ಡಿಸ್ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 825 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್ನ ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 4 Gen 5 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಎರಡು ಭಿನ್ನ ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 16 ಆಧಾರಿತ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ರೆಡ್ಮಿ 17 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್ಯೆಂದರೆ ಇದು 7,900mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಪಡೆದಿದೆ.
Disclosure: This Article Contains Affiliate Links