Redmi 17 5G ಮೊಬೈಲ್‌ ನಾಳೆಯಿಂದ ಖರೀದಿಗೆ ಲಭ್ಯ; ಫೀಚರ್ಸ್‌ ಹಾಗೂ ಬೆಲೆ ಗಮನಿಸಿ

HIGHLIGHTS

ಇಂದು (ಸೆಪ್ಟೆಂಬರ್ 9 ರಿಂದ) ರೆಡ್ಮಿ 17 5G ಮೊಬೈಲ್‌ ಸೇಲ್‌

ರೆಡ್ಮಿ 17 5G ಮೊಬೈಲ್‌ 7,900mAh ಬ್ಯಾಟರಿ ಸೌಲಭ್ಯ ಪಡೆದಿದೆ

ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 4 Gen 5 ಪ್ರೊಸೆಸರ್‌ ಹೊಂದಿದೆ

Redmi 17 5G ಮೊಬೈಲ್‌ ನಾಳೆಯಿಂದ ಖರೀದಿಗೆ ಲಭ್ಯ; ಫೀಚರ್ಸ್‌ ಹಾಗೂ ಬೆಲೆ ಗಮನಿಸಿ

ರೆಡ್ಮಿ ಸಂಸ್ಥೆಯ ಹೊಸ Redmi 17 5G ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಹಾಗೂ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ನಾಳೆ (ಸೆಪ್ಟೆಂಬರ್ 10 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಸೇಲ್‌ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 5 ಚಿಪ್‌ಸೆಟ್ ಪ್ರೊಸೆಸರ್‌ ಜೊತೆಗೆ 7,900mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್‌ 50MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್‌ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರೆಡ್ಮಿ 17 5G ಮೊಬೈಲ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Apple Launch Event 2026: ಈ ಕಾರ್ಯಕ್ರಮದ ಲೈವ್ ವೀಕ್ಷಣೆ ಹೇಗೆ? ನಿರೀಕ್ಷೆಗಳೇನು? ಇಲ್ಲಿದೆ ಮಾಹಿತಿ

ನಾಳೆ Redmi 17 5G ಮೊಬೈಲ್‌ ಸೇಲ್‌

ಬಜೆಟ್‌ ಬೆಲೆಯಲ್ಲಿ ನೂತನವಾಗಿ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ರೆಡ್ಮಿ 17 5G ಮೊಬೈಲ್‌ ನಾಳೆ (ಸೆಪ್ಟೆಂಬರ್ 10 ರಿಂದ) ಮಧ್ಯಾಹ್ನ 12 ಗಂಟೆಗೆ ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ 23,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ವೇರಿಯಂಟ್‌ 26,999 ರೂ.ಗಳ ಬೆಲೆ ಪಡೆದುಕೊಂಡಿದೆ. ಈ ಫೋನ್‌ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಈ ಫೋನ್‌ ಅಬ್ಸೊಲ್ಯೂಟ್ ಬ್ಲ್ಯಾಕ್, ಎಂಡ್ಲೆಸ್ ಬ್ಲೂ ಮತ್ತು ಎಟರ್ನಲ್ ಆರೆಂಜ್ ಕಲರ್‌ ಆಯ್ಕೆ ಪಡೆದುಕೊಂಡಿದೆ.

Redmi 17 5G Goes Official in India With Snapdragon 4 Gen 5 Chipset Price Specs

ರೆಡ್ಮಿ 17 5G ಮೊಬೈಲ್‌ ಫೀಚರ್ಸ್‌

ರೆಡ್ಮಿ 17 5G ಮೊಬೈಲ್‌ 6.9 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 825 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಕ್ವಾಲ್ಕಾಮ್‌ನ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 5 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ಎರಡು ಭಿನ್ನ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ಆಧಾರಿತ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ ರೆಡ್ಮಿ 17 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,900mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP64 ರೇಟಿಂಗ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile