Redmi 17C 5G ಮೊಬೈಲ್‌ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ! 6,000mAh ಬ್ಯಾಟರಿ ಸೌಲಭ್ಯ

HIGHLIGHTS

ರೆಡ್ಮಿ 17C 5G ಫೋನಿಗೆ ಅಮೆಜಾನ್‌ನಲ್ಲಿ ಸಖತ್ ಕೊಡುಗೆ

ರೆಡ್ಮಿ 17C 5G ಮೊಬೈಲ್‌ 6,000mAh ಬ್ಯಾಟರಿ ಒಳಗೊಂಡಿದೆ

ರೆಡ್ಮಿ 17C 5G ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ನಲ್ಲಿ ಲಭ್ಯ

ದಸರಾ ಹಬ್ಬದ ಅಂಗವಾಗಿ ಅಮೆಜಾನ್‌ ತಾಣವು ಆಯೋಜಿಸಿರುವ Amazon Great Indian Festival Sale 2026 ಸೇಲ್ ಆನ್‌ಲೈನ್‌ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ Redmi 17C 5G ಮೊಬೈಲ್‌ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ 17C 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಬಿಗ್ ಡಿಸ್ಕೌಂಟ್‌ನಲ್ಲಿ Samsung Galaxy S25 5G ಖರೀದಿಸಲು ಇದಕ್ಕಿಂತ ಬೆಸ್ಟ್‌ ಆಫರ್‌ ಬೇಕೆ?

Redmi 17C 5G ಫೋನಿಗೆ ಬಿಗ್ ಡಿಸ್ಕೌಂಟ್

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ 17C 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 44,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 22,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಕಾಫಿ ಬ್ರೂ, ಡಾರ್ಕ್ ನೈಟ್ ಮತ್ತು ಪರ್ಪಲ್ ಡಾನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರೆಡ್ಮಿ 17C 5G ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Redmi 17C 5G

ರೆಡ್ಮಿ 17C 5G ಮೊಬೈಲ್‌ ಫೀಚರ್ಸ್‌

ರೆಡ್ಮಿ 17C 5G ಸ್ಮಾರ್ಟ್‌ಫೋನ್‌ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 810 ನಿಟ್ಸ್ ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್‌ 720×1,600 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್‌ 16 ಆಪರೇಟಿಂಗ್ ಸಿಸ್ಟಮ್‌ (HyperOS 3) ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಸಿಂಪಡಣೆಯಿಂದ ರಕ್ಷಣೆಗಾಗಿ ಇದು IP64 ರೇಟಿಂಗ್ ಅನ್ನು ಪಡೆದುಕೊಂಡಿದೆ.

ಹಾಗೆಯೇ ರೆಡ್ಮಿ 17C 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 33W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :