ಇತ್ತೀಚಿನ Redmi A4 5G ಸ್ಮಾರ್ಟ್‌ಫೋನ್‌ ಈಗ ಅಗ್ಗದ ಬೆಲೆಯಲ್ಲಿ ಲಭ್ಯ! ಬೆಸ್ಟ್‌ ಆಫರ್‌

HIGHLIGHTS

ರೆಡ್ಮಿ A4 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ

ರೆಡ್ಮಿ ಸಂಸ್ಥೆಯ ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದೆ

ರೆಡ್ಮಿಯ ಈ ಮೊಬೈಲ್‌ 5160mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ

ರೆಡ್ಮಿ ಕಂಪನಿಯ ಅಗ್ಗದ ಫೋನ್‌ಗಳ ಪೈಕಿ Redmi A4 5G ಸ್ಮಾರ್ಟ್‌ಫೋನ್‌ ಸಹ ಗಮನ ಸೆಳೆದಿದೆ. ಸದ್ಯ ಈ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡು ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ. ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಫೋನ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4s Gen 2 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 5160mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ A4 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಟ್ರಿಪಲ್‌ ಕ್ಯಾಮೆರಾ ಇರುವ Motorola Edge 60 Pro ಮೊಬೈಲ್‌ಗೆ ಈಗ ಭಾರೀ ಡಿಸ್ಕೌಂಟ್‌!

Redmi A4 5G ಫೋನ್‌ ಪ್ರೈಸ್‌ನಲ್ಲಿ ಸಖತ್ ಇಳಿಕೆ

ಕಡಿಮೆ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ A4 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 12,988 ರೂ.ಗಳು ಆಗಿದ್ದು ಆದರೆ ಬ್ಯಾಂಕ್ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 12,338 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಟಾರಿ ಬ್ಲ್ಯಾಕ್ ಮತ್ತು ಸ್ಪಾರ್ಕಲ್ ಪರ್ಪಲ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ರೆಡ್ಮಿ A4 5G ಫೀಚರ್ಸ್‌ ಮಾಹಿತಿ

ರೆಡ್ಮಿ A4 5G ಮೊಬೈಲ್‌ ಡಿಸ್‌ಪ್ಲೇಯು 6.88 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 4,500 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4s Gen 2 ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB RAM + 64GB ಹಾಗೂ 128GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ ರೆಡ್ಮಿ A4 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಸೆನ್ಸಾರ್‌ ಸಾಮರ್ಥ್ಯದ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 5MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 5160mAh ಬ್ಯಾಟರಿ ಜೊತೆಗೆ 18W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :