ಕಡಿಮೆ ಬೆಲೆಯ Redmi A7 Pro 4G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ! ಆಫರ್‌ ನೋಡಿ

HIGHLIGHTS

ರೆಡ್ಮಿ A7 ಪ್ರೊ 4G ಮೊಬೈಲ್‌ ಇದೀಗ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ

ರೆಡ್ಮಿ A7 ಪ್ರೊ 4G ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ

ರೆಡ್ಮಿಯ ಈ ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ

ಕಡಿಮೆ ಬೆಲೆಯ Redmi A7 Pro 4G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ! ಆಫರ್‌ ನೋಡಿ

ನಿಮಗೆ ಆಫರ್‌ನಲ್ಲಿ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಯೋಚನೆ ಇದ್ದರೆ, ಅಮೆಜಾನ್‌ ಇ ಕಾಮರ್ಸ್‌ ತಾಣದ ಕಡೆಗೆ ಗಮನ ನೀಡಿ. ಹೌದು, ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಇತ್ತೀಚಿನ Redmi A7 Pro 4G ಸ್ಮಾರ್ಟ್‌ಫೋನ್‌ ಆಕರ್ಷಕ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಫೋನ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 4G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಸಂಸ್ಥೆಯ ಈ ಅಗ್ಗದ Postpaid ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಸೌಲಭ್ಯ

Redmi A7 Pro 4G ಮೊಬೈಲ್‌ ಬೆಲೆಯಲ್ಲಿ ಇಳಿಕೆ

ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ A7 ಪ್ರೊ 4G ಮೊಬೈಲ್ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 11,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ ಬ್ಲ್ಯಾಕ್‌ ಮತ್ತು ಸ್ಕೈ ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Redmi A7 Pro 4G

ರೆಡ್ಮಿ A7 ಪ್ರೊ 4G ಫೋನಿನ ಫೀಚರ್ಸ್‌ ಮಾಹಿತಿ

ರೆಡ್ಮಿ A7 ಪ್ರೊ 4G ಮೊಬೈಲ್‌ 6.9 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದ್ದು ಇದರ ಸ್ಕ್ರೀನ್‌ 720 x 1,600 ಪಿಕ್ಸೆಲ್‌ಗಳು ರೆಸಲ್ಯೂಶನ್‌ ಅನ್ನು ಒಳಗೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದಿರುವು ಜೊತೆಗೆ 800 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ ಯುನಿಸಾಕ್ T7250 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 16 ಆಧಾರಿತ ಹೈಪರ್‌ಓಎಸ್ 3 ಜೊತೆಗೆ 64GB ಸ್ಟೋರೇಜ್‌ ಆಯ್ಕೆಯನ್ನು ಪಡೆದುಕೊಂಡಿದೆ.

ರೆಡ್ಮಿ A7 ಪ್ರೊ 4G ಮೊಬೈಲ್‌ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್‌ 6,300 mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 15W ವೈರ್ಡ್ ಚಾರ್ಜಿಂಗ್ ಮತ್ತು 7.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಆಯ್ಕೆ ಇದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile