ನಿಮಗೆ ಆಫರ್‌ನಲ್ಲಿ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಖರೀದಿ ಮಾಡುವ ಯೋಚನೆ ಇದ್ದರೆ, ಅಮೆಜಾನ್ ಇ ಕಾಮರ್ಸ್ ತಾಣದ ಕಡೆಗೆ ಗಮನ ನೀಡಿ. ಹೌದು, ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಇತ್ತೀಚಿನ Redmi A7 Pro 4G ಸ್ಮಾರ್ಟ್‌ಫೋನ್ ಆಕರ್ಷಕ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Unisoc T7250 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 4G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Jio ಸಂಸ್ಥೆಯ ಈ ಅಗ್ಗದ Postpaid ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಸೌಲಭ್ಯ
ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ A7 ಪ್ರೊ 4G ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 11,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ ಬ್ಲ್ಯಾಕ್ ಮತ್ತು ಸ್ಕೈ ಸನ್‌ಸೆಟ್ ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ರೆಡ್ಮಿ A7 ಪ್ರೊ 4G ಮೊಬೈಲ್ 6.9 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದ್ದು ಇದರ ಸ್ಕ್ರೀನ್ 720 x 1,600 ಪಿಕ್ಸೆಲ್‌ಗಳು ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರುವು ಜೊತೆಗೆ 800 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನ್ ಯುನಿಸಾಕ್ T7250 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 16 ಆಧಾರಿತ ಹೈಪರ್‌ಓಎಸ್ 3 ಜೊತೆಗೆ 64GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.
ರೆಡ್ಮಿ A7 ಪ್ರೊ 4G ಮೊಬೈಲ್ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್ 6,300 mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 15W ವೈರ್ಡ್ ಚಾರ್ಜಿಂಗ್ ಮತ್ತು 7.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಆಯ್ಕೆ ಇದೆ.