ಕಡಿಮೆ ಬೆಲೆಯಲ್ಲಿ ಲಾಂಚ್‌ ಆಯ್ತು Redmi A7 Pro 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೀಗಿವೆ

HIGHLIGHTS

ರೆಡ್ಮಿ ಸಂಸ್ಥೆಯ ಈ ಹೊಸ ಫೋನ್‌ 6,300mAh ಬ್ಯಾಟರಿ ಸೌಲಭ್ಯ ಪಡೆದಿದೆ

ಈ ನೂತನ ಮೊಬೈಲ್‌ Unisoc T8300 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ

ಮೈಕ್ರೊ SD ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ

ಕಡಿಮೆ ಬೆಲೆಯಲ್ಲಿ ಲಾಂಚ್‌ ಆಯ್ತು Redmi A7 Pro 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೀಗಿವೆ

ಪ್ರಮುಖ ಮೊಬೈಲ್‌ ಬ್ರಾಂಡ್‌ಗಳ ಪೈಕಿ ಒಂದಾದ Redmi ಸಂಸ್ಥೆಯು ಇದೀಗ ಹೊಸದಾಗಿ Redmi A7 Pro 5G ಮೊಬೈಲ್‌ ಅನ್ನು ಇಂದು (ಏಪ್ರಿಲ್‌ 13 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಪರಿಚಯಿಸಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Unisoc T8300 ಪ್ರೊಸೆಸರ್‌ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್‌ 6,300mAh ಬ್ಯಾಟರಿ ಸಪೋರ್ಟ್‌ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಪಡೆದುಕೊಂಡಿದ. ಅಲ್ಲದೇ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಅನ್ನು ಪಡೆದುಕೊಂಡಿರುವ ಜೊತೆಗೆ HD+ LCD ಸೌಲಭ್ಯ ಒಳಗೊಂಡಿದೆ. ಹಾಗಾದರೆ ರೆಡ್ಮಿ A7 ಪ್ರೊ 5G ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Chatgpt Car Photo Editing Prompts: ಕಾರ್ ಫೋಟೋ ಎಡಿಟಿಂಗ್ ಮಾಡಲು ಇಲ್ಲಿವೆ ಬೆಸ್ಟ್‌ 10+ ಪ್ರಾಂಪ್ಟ್‌

Redmi A7 Pro 5G ಬೆಲೆ ಹಾಗೂ ಲಭ್ಯತೆ

ದೇಶಿಯ ಮೊಬೈಲ್‌ ಮಾರುಕಟ್ಟೆ ಪ್ರವೇಶಿಸಿರುವ ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನ್‌ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 11,499 ರೂ.ಗಳು ಆಗಿದೆ. ಹಾಗೆಯೇ 128GB ಸ್ಟೋರೇಜ್ ವೇರಿಯಂಟ್‌ ಬೆಲೆ 12,499 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಬ್ಲ್ಯಾಕ್‌, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 15 ರಿಂದ ಫ್ಲಿಪ್‌ಕಾರ್ಟ್ ಮತ್ತು ಶಿಯೋಮಿ ವೆಬ್‌ಸೈಟ್‌ ಮೂಲಕ ಮಾರಾಟಕ್ಕೆ ಬರಲಿದೆ.

Redmi A7 Pro 5G

ರೆಡ್ಮಿ A7 ಪ್ರೊ 5G ಮೊಬೈಲ್‌ ಫೀಚರ್ಸ್‌

ಹೊಸ ರೆಡ್ಮಿ A7 ಪ್ರೊ 5G ಮೊಬೈಲ್‌ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ Unisoc T8300 ಪ್ರೊಸೆಸರ್‌ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo