ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾದ Redmi ಸಂಸ್ಥೆಯು ಇದೀಗ ಹೊಸದಾಗಿ Redmi A7 Pro 5G ಮೊಬೈಲ್ ಅನ್ನು ಇಂದು (ಏಪ್ರಿಲ್ 13 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಪರಿಚಯಿಸಿದೆ. ಈ ಹೊಸ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Unisoc T8300 ಪ್ರೊಸೆಸರ್ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್ 6,300mAh ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಪಡೆದುಕೊಂಡಿದ. ಅಲ್ಲದೇ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿರುವ ಜೊತೆಗೆ HD+ LCD ಸೌಲಭ್ಯ ಒಳಗೊಂಡಿದೆ. ಹಾಗಾದರೆ ರೆಡ್ಮಿ A7 ಪ್ರೊ 5G ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Chatgpt Car Photo Editing Prompts: ಕಾರ್ ಫೋಟೋ ಎಡಿಟಿಂಗ್ ಮಾಡಲು ಇಲ್ಲಿವೆ ಬೆಸ್ಟ್ 10+ ಪ್ರಾಂಪ್ಟ್
ದೇಶಿಯ ಮೊಬೈಲ್ ಮಾರುಕಟ್ಟೆ ಪ್ರವೇಶಿಸಿರುವ ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 11,499 ರೂ.ಗಳು ಆಗಿದೆ. ಹಾಗೆಯೇ 128GB ಸ್ಟೋರೇಜ್ ವೇರಿಯಂಟ್ ಬೆಲೆ 12,499 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 15 ರಿಂದ ಫ್ಲಿಪ್‌ಕಾರ್ಟ್ ಮತ್ತು ಶಿಯೋಮಿ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಬರಲಿದೆ.
ಹೊಸ ರೆಡ್ಮಿ A7 ಪ್ರೊ 5G ಮೊಬೈಲ್ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ Unisoc T8300 ಪ್ರೊಸೆಸರ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.