Redmi ಕಂಪನಿಯ ಈ ಸ್ಮಾರ್ಟ್‌ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ; ಬಿಗ್ ಬ್ಯಾಟರಿ ಸಪೋರ್ಟ್‌

HIGHLIGHTS

ಅಮೆಜಾನ್‌ನಲ್ಲಿ ರೆಡ್ಮಿ A7 ಪ್ರೊ 5G ಫೋನ್‌ಗೆ ಬಿಗ್ ಡಿಸ್ಕೌಂಟ್‌

ರೆಡ್ಮಿ A7 ಪ್ರೊ ಮೊಬೈಲ್‌ 6,300mAh ಬ್ಯಾಟರಿ ಸಪೋರ್ಟ್ ಪಡೆದಿದೆ

ರೆಡ್ಮಿಯ ಈ ಫೋನ್‌ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ

ರೆಡ್ಮಿ ಕಂಪನಿಯ ಬಜೆಟ್ ಬೆಲೆಯ ಫೋನ್‌ಗಳ ಪೈಕಿ ಒಂದಾದ Redmi A7 Pro 5G ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್‌ 6,300mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಬ್ಲ್ಯಾಕ್‌, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ 629 ರೂ.ಗಳ ಪ್ಲಾನಿನಲ್ಲಿ ಸಖತ್ ಪ್ರಯೋಜನ! ಓಟಿಟಿ, ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ

Redmi A7 Pro 5G ಬೆಲೆಯಲ್ಲಿ ಭಾರೀ ಕಡಿತ

ಆಕರ್ಷಕ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ A7 ಪ್ರೊ 5G ಮೊಬೈಲ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 25,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 14,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್‌ ಬ್ಲ್ಯಾಕ್‌, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆ ಹೊಂದಿದೆ.

ರೆಡ್ಮಿ A7 ಪ್ರೊ 5G ಮೊಬೈಲ್‌ ಫೀಚರ್ಸ್‌

ರೆಡ್ಮಿ A7 ಪ್ರೊ 5G ಮೊಬೈಲ್‌ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :