ಪ್ರಸ್ತುತ ಅಮೆಜಾನ್ ಆಯೋಜಿಸಿರುವ Amazon Great Summer Sale ಮೊಬೈಲ್ ಖರೀದಿಸುವ ಗ್ರಾಹಕರಿಗೆ ಒಳ್ಳೆಯ ಪ್ಲಾಟ್‌ಫಾರ್ಮ್ ಎನಿಸಿದೆ. ಈ ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರೆಡ್ಮಿ ಕಂಪನಿಯ Redmi A7 Pro 5G ಮೊಬೈಲ್ ಸಹ ಆಕರ್ಷಕ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ Motorola Razr Fold ಸ್ಮಾರ್ಟ್‌ಫೋನ್ ಬಿಡುಗಡೆ! ಟ್ರಿಪಲ್ ಕ್ಯಾಮೆರಾ ಸಪೋರ್ಟ್
ರೆಡ್ಮಿ A7 ಪ್ರೊ 5G ಮೊಬೈಲ್ ಅಗ್ಗದ ದರದಲ್ಲಿ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್ ರಿಯಾಯಿತಿ ಪಡೆದಿದೆ. ಈ ಮೊಬೈಲ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 11,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಮೊಬೈಲ್ ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಹೊಸ ರೆಡ್ಮಿ A7 ಪ್ರೊ 5G ಮೊಬೈಲ್ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Disclosure: This Article Contains Affiliate Links