ಇಂದು Redmi A7 Pro 5G ಮೊಬೈಲ್ ಸೇಲ್ ಪ್ರಾರಂಭ! 6,300mAh ಬ್ಯಾಟರಿ ಸೌಲಭ್ಯ
ಇಂದು (ಏಪ್ರಿಲ್ 15 ರಿಂದ) ರೆಡ್ಮಿ A7 ಪ್ರೊ 5G ಖರೀದಿಗೆ ಲಭ್ಯ
ಈ ಹೊಸ ಸ್ಮಾರ್ಟ್‌ಫೋನ್ Unisoc T8300 ಪ್ರೊಸೆಸರ್ ಪಡೆದುಕೊಂಡಿದೆ
ಈ ನೂತನ ಮೊಬೈಲ್ ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್ ಆಯ್ಕೆ ಹೊಂದಿದೆ
ಇತ್ತೀಚಿಗೆ ಹೊಸದಾಗಿ ಬಿಡುಗಡೆ ಆಗಿರುವ Redmi A7 Pro 5G ಸ್ಮಾರ್ಟ್‌ಫೋನ್ ಬಜೆಟ್ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಏಪ್ರಿಲ್ 15 ರಂದು) ದೇಶೀಯ ಮಾರುಕಟ್ಟೆಯಲ್ಲಿ ಸೇಲ್ ಶುರು ಮಾಡಲಿದೆ. ಈ ನೂತನ ಮೊಬೈಲ್ ಆಕ್ಟಾ-ಕೋರ್ Unisoc T8300 ಪ್ರೊಸೆಸರ್ ಒಳಗೊಂಡಿರುವ ಜೊತೆಗೆ 6,300mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಅಲ್ಲದೇ ಈ ಫೋನ್ ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಕಲರ್ ಆಯ್ಕೆಯೊಂದಿಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ರೆಡ್ಮಿ A7 ಪ್ರೊ 5G ಫೋನಿನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 5000mAh ಬ್ಯಾಟರಿ ಇರುವ ಈ ಮೊಬೈಲ್ ಜಸ್ಟ್ 8,999 ರೂ.ಗಳಿಗೆ ಲಭ್ಯ! ಬೆಸ್ಟ್ ಆಫರ್ ಇದೆ
Redmi A7 Pro 5G ಬೆಲೆ ಹಾಗೂ ಲಭ್ಯತೆ
ಹೊಸ ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 15 ರಂದು) ಮಧ್ಯಾಹ್ನ 12 ರಂದು ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇದರ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 11,499 ರೂ.ಗಳು ಆಗಿದೆ. ಹಾಗೆಯೇ 128GB ಸ್ಟೋರೇಜ್ ವೇರಿಯಂಟ್ ಬೆಲೆ 12,499 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ರೆಡ್ಮಿ A7 ಪ್ರೊ 5G ಮೊಬೈಲ್ ಫೀಚರ್ಸ್
ಹೊಸ ರೆಡ್ಮಿ A7 ಪ್ರೊ 5G ಮೊಬೈಲ್ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ Unisoc T8300 ಪ್ರೊಸೆಸರ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile