Flipkart GOAT ಸೇಲ್‌ನಲ್ಲಿ ರೆಡ್ಮಿ A7 ಪ್ರೊ ಮೊಬೈಲ್‌ಗೆ ಭಾರೀ ಡಿಸ್ಕೌಂಟ್‌! ಬಿಗ್ ಬ್ಯಾಟರಿ ಇದೆ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ A7 ಪ್ರೊ ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ

ರೆಡ್ಮಿ A7 ಪ್ರೊ ಸ್ಮಾರ್ಟ್‌ಫೋನ್‌ 13MP ಸೆನ್ಸಾರ್‌ ಕ್ಯಾಮೆರಾ ರಚನೆ ಪಡೆದಿದೆ

ರೆಡ್ಮಿ A7 ಪ್ರೊ ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ

Flipkart GOAT ಸೇಲ್‌ನಲ್ಲಿ ರೆಡ್ಮಿ A7 ಪ್ರೊ ಮೊಬೈಲ್‌ಗೆ ಭಾರೀ ಡಿಸ್ಕೌಂಟ್‌! ಬಿಗ್ ಬ್ಯಾಟರಿ ಇದೆ

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ಇದೀಗ ಗೋಟ್ ಸೇಲ್ (Flipkart GOAT Sale 2026) ಅನ್ನು ಘೋಷಿಸಿದೆ. ಈ ವಿಶೇಷ ಮಾರಾಟದಲ್ಲಿ ರೆಡ್ಮಿ ಕಂಪನಿಯ Redmi A7 Pro ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಬ್ಲ್ಯಾಕ್‌, ಮಿಸ್ಟ್ ಬ್ಲೂ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ರೆಡ್ಮಿ A7 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ ಬಿಡುಗಡೆ ಆಯ್ತು Oppo Reno 16 ಸ್ಮಾರ್ಟ್‌ಫೋನ್! ಟ್ರಿಪಲ್‌ 50MP ಕ್ಯಾಮೆರಾ ಸೌಲಭ್ಯ

Flipkart GOAT Sale: Redmi A7 Pro ಬೆಲೆಯಲ್ಲಿ ಇಳಿಕೆ

ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರಿಯಲ್‌ಮಿ ಮೊಬೈಲ್‌ ಕಂಪನಿಯ ರೆಡ್ಮಿ A7 ಪ್ರೊ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 26,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 12,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Flipkart GOAT Redmi A7 pro

ರೆಡ್ಮಿ A7 ಪ್ರೊ 5G ಮೊಬೈಲ್‌ ಫೀಚರ್ಸ್‌

ಹೊಸ ರೆಡ್ಮಿ A7 ಪ್ರೊ 5G ಮೊಬೈಲ್‌ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 800 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ Unisoc T8300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile