ಅಗ್ಗದ ಬೆಲೆಯ Redmi A7 Pro ಮೊಬೈಲ್ ಫ್ಲಿಪ್ಕಾರ್ಟ್ನಲ್ಲಿ ಈಗ ಮತ್ತಷ್ಟು ಸಸ್ತಾ ಬೆಲೆಗೆ ಲಭ್ಯ!
ಫ್ಲಿಪ್ಕಾರ್ಟ್ನಲ್ಲಿ ರೆಡ್ಮಿ A7 ಪ್ರೊ ಮೊಬೈಲ್ಗೆ ಬಿಗ್ ಆಫರ್
ರೆಡ್ಮಿ A7 ಪ್ರೊ ಮೊಬೈಲ್ 6,300mAh ಬ್ಯಾಟರಿ ಸೌಲಭ್ಯ ಪಡೆದಿದೆ
ರೆಡ್ಮಿ A7 ಪ್ರೊ ಸ್ಮಾರ್ಟ್ಫೋನ್ ಮೂರು ಆಕರ್ಷಕ ಕಲರ್ಗಳಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ ಸ್ಯಾಮ್ಸಂಗ್ ಕಂಪನಿಯ Redmi A7 Pro ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ Unisoc T8300 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,300mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ರೆಡ್ಮಿ A7 ಪ್ರೊ ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Redmi A7 Pro ಮೊಬೈಲ್ ಬೆಲೆಯಲ್ಲಿ ಇಳಿಕೆ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ A7 ಪ್ರೊ ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 26,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 13,995 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲ್ಯಾಕ್, ಮಿಸ್ಟ್ ಬ್ಲೂ ಮತ್ತು ಸನ್ಸೆಟ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ರೆಡ್ಮಿ A7 ಪ್ರೊ 5G ಮೊಬೈಲ್ ಫೀಚರ್ಸ್ ಹೀಗಿವೆ
ರೆಡ್ಮಿ A7 ಪ್ರೊ 5G ಮೊಬೈಲ್ 6.9 ಇಂಚಿನ HD+ LCD ಡಿಸ್ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್ಪ್ಲೇಯು 800 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ Unisoc T8300 ಚಿಪ್ಸೆಟ್ ಪ್ರೊಸೆಸರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರೆಡ್ಮಿ A7 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,300mAh ಬ್ಯಾಟರಿ ಬ್ಯಾಕ್ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile
