Redmi Note 14 5G ಈಗ 12,500ರೂಗಳಿಗಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ! ಆಫರ್ ಮಾಹಿತಿ ಇಲ್ಲಿದೆ
ಫ್ಲಿಪ್‌ಕಾರ್ಟ್ ತಾಣದಲ್ಲಿ Redmi Note 14 5G ಫೋನಿಗೆ ಆಕರ್ಷಕ ರಿಯಾಯಿತಿ
ಗ್ರಾಹಕರು Flipkart SBI ಅಥವಾ Flipkart ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಬಹುದು
ಈ ಫೋನ್ MediaTek Dimensity 7025 Ultra ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ
ಜನಪ್ರಿಯ Redmi Note 14 5G ಸ್ಮಾರ್ಟ್‌ಫೋನ್ ಖರೀದಿಸಲು ಇದೀಗ ಸುಸಮಯ. ಏಕೆಂದರೆ ಈ ಆಕರ್ಷಕ ಮೊಬೈಲ್ ಪ್ರಸ್ತುತ Flipkart ಇ ಕಾಮರ್ಸ್ ತಾಣದಲ್ಲಿ ಭಾರೀ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆದಿರುವ ಈ ಮೊಬೈಲ್ ತನ್ನ ವರ್ಗದಲ್ಲೇ ಇದು AMOLED ಡಿಸ್‌ಪ್ಲೇ ಹೊಂದಿದ್ದು ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್ ಪವರ್ ಪಡೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಇರುವ ಆಫರ್ ಮೂಲಕ ಈ ಫೋನ್ ಅನ್ನು 12,500 ರೂಗಳಿಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಹಾಗಾದರೇ ಫ್ಲಿಪ್‌ಕಾರ್ಟ್‌ನಲ್ಲಿ Redmi Note 14 5G ಫೋನಿಗೆ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : ನೀವು Jio ಗ್ರಾಹಕರೇ? ಪ್ರತಿದಿನ ಹೆಚ್ಚಿನ Data ಬೇಕಿದ್ದರೆ ಈ ಪ್ಲಾನ್‌ಗಳನ್ನು ರೀಚಾರ್ಜ್ ಮಾಡಿ!
Redmi Note 14 5G ಆಫರ್ ಬಗ್ಗೆ ಇಲ್ಲಿದೆ ಮಾಹಿತಿ
ಸದ್ಯ ರೆಡ್ಮಿಯ ಈ ಸ್ಮಾರ್ಟ್‌ಫೋನ್ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ Redmi Note 14 5G ಫೋನ್ 16,299 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದು ಮೂಲ ಬೆಲೆಗಿಂತ 2,700 ರೂ.ಗಳ ಫ್ಲಾಟ್ ಡಿಸ್ಕೌಂಟ್ ಆಗಿದೆ. ಇದನ್ನು ಹೊರತುಪಡಿಸಿ ಗ್ರಾಹಕರು Flipkart SBI ಅಥವಾ Flipkart ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿ ಮಾಡಿದರೆ 4,000 ರೂಗಳ ವರೆಗೆ 5% ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಆಫರ್‌ಗಳನ್ನು ಪಡೆದರೆ ಗ್ರಾಹಕರು ಫೋನ್ ಅನ್ನು 12,299 ರೂಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಹಾಗೆಯೇ ದೈತ್ಯ ಇ ಕಾಮರ್ಸ್ ತಾಣವು 574 ರೂಗಳಿಂದ ಪ್ರಾರಂಭವಾಗುವ EMI ಆಯ್ಕೆಗಳನ್ನು ಸಹ ನೀಡುತ್ತಿದೆ.
Redmi Note 14 5G ಫೋನಿನ ಪ್ರಮುಖ ಫೀಚರ್ಸ್
Redmi Note 14 ಮೊಬೈಲ್ 6.67 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು ಇದರ ಸ್ಕ್ರೀನ್ 120Hz ವರೆಗಿನ ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದೆ. ಹಾಗೆಯೇ ಬೆಳಕಿನಲ್ಲಿ 2,100 ನಿಟ್‌ಗಳ ಗರಿಷ್ಠ ಬ್ರೈಟ್ನೆಸ್ ಅನ್ನು ಒದಗಿಸಲಿದೆ. ಇನ್ನು ಈ ಫೋನ್ MediaTek Dimensity 7025 Ultra ಚಿಪ್‌ಸೆಟ್ ಪ್ರೊಸೆಸರ್ ಪವರ್‌ನ ಶಕ್ತಿಯಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಡ್ಯುಯಲ್ ಸ್ಟೀರಿಯೋ ಸ್ಪೀಕರ್ ವ್ಯವಸ್ಥೆಯನ್ನು ಪಡೆದಿದೆ.
ಅದೇ ರೀತಿ ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಇನ್ನು ಇದರ ಸೆಕೆಂಡರಿ ಕ್ಯಾಮೆರಾವು 2MP ಆಗಿದ್ದು ಸಪೋರ್ಟಿಂಗ್ ಲೆನ್ಸ್ ಪಡೆದಿವೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವೀಡಿಯೊ ಕರೆಗಳಿಗಾಗಿ 16MP ಸೆನ್ಸಾರ್ ಇರುವ ಕ್ಯಾಮೆರಾ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಈ ಮೊಬೈಲ್ 5,110mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ನೀಡಲಾಗಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile