Redmi Note 14 SE 5G ಖರೀದಿಗೆ ಇದೇ ಬೆಸ್ಟ್‌ ಟೈಮ್‌! ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ

HIGHLIGHTS

ರೆಡ್ಮಿ ನೋಟ್‌ 14 SE 5G ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ

ರೆಡ್ಮಿ ನೋಟ್‌ 14 SE 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ

ರೆಡ್ಮಿ ಸಂಸ್ಥೆಯ ಈ ಫೋನ್‌ Mediatek Dimensity 7025 Ultra ಪ್ರೊಸೆಸರ್‌ ಹೊಂದಿದೆ

Redmi Note 14 SE 5G ಖರೀದಿಗೆ ಇದೇ ಬೆಸ್ಟ್‌ ಟೈಮ್‌! ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ

ಪ್ರಸ್ತುತ ಇ ಕಾಮರ್ಸ್‌ ತಾಣದ ಮೂಲಕ ಆಫರ್‌ನಲ್ಲಿ ಹೊಸ ಫೋನ್‌ ಖರೀದಿಸುವ ಯೋಚನೆ ಇದ್ದರೆ, ಫ್ಲಿಪ್‌ಕಾರ್ಟ್‌ನತ್ತ ಗಮನಿಸಿ. ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ರೆಡ್ಮಿ ಸಂಸ್ಥೆಯ Redmi Note 14 SE 5G ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ರೆಡ್ಮಿಯ ಈ ಮೊಬೈಲ್‌ 5,110mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಇದು Mediatek Dimensity 7025 Ultra ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್‌ ರೆಡ್‌, ವೈಟ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ರೆಡ್ಮಿ ನೋಟ್‌ 14 SE 5G ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 50MP ಸೆಲ್ಫಿ ಕ್ಯಾಮೆರಾ ಇರುವ ಪಡೆದಿರುವ Vivo V50 ಬೆಲೆಯಲ್ಲಿ ಈಗ ಭಾರೀ ಕಡಿತ!

Redmi Note 14 SE 5G ಬೆಲೆಯಲ್ಲಿ ಸಖತ್ ಇಳಿಕೆ

ಜನಪ್ರಿಯ ವಿವೋ V50 ಮೊಬೈಲ್‌ ಸದ್ಯ Flipkart ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 6GB RAM + 128 GB ವೇರಿಯಂಟ್‌ 19,999 ರೂಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 16,999 ರೂಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಅಂದಹಾಗೆ ಈ ಫೋನ್‌ ರೆಡ್‌, ವೈಟ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Redmi Note 14 SE

ರೆಡ್ಮಿ ನೋಟ್‌ 14 SE 5G ಮೊಬೈಲ್‌ನ ಪ್ರಮುಖ ಫೀಚರ್ಸ್‌

ರೆಡ್ಮಿ ನೋಟ್‌ 14 SE 5G ಮೊಬೈಲ್‌ ಡಿಸ್‌ಪ್ಲೇಯು 6.67 ಇಂಚಿನ AMOLED ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 1080 x 2400 ಪಿಕ್ಸಲ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ Mediatek Dimensity 7025 Ultra ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಈ ಮೊಬೈಲ್‌ 6GB RAM + 128GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ.

ಅಲ್ಲದೇ ರೆಡ್ಮಿ ನೋಟ್‌ 14 SE 5G ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8MP ಸೆನ್ಸಾರ್‌ ಹಾಗೂ 2MP ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಸ್ಮಾರ್ಟ್‌ಫೋನ್‌ 20MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಬರೋಬ್ಬರಿ 5,110mAh ಬ್ಯಾಟರಿ ಜೊತೆಗೆ 45W ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿದೆ. ಅಲ್ಲದೇ ಇದು ಧೂಳು ನಿರೋಧಕ, ನೀರು ನಿರೋಧಕ ರೇಟಿಂಗ್ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo