ಪ್ರಸ್ತುತ ಇ ಕಾಮರ್ಸ್ ತಾಣದ ಮೂಲಕ ಆಫರ್‌ನಲ್ಲಿ ಹೊಸ ಫೋನ್ ಖರೀದಿಸುವ ಯೋಚನೆ ಇದ್ದರೆ, ಫ್ಲಿಪ್‌ಕಾರ್ಟ್‌ನತ್ತ ಗಮನಿಸಿ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ರೆಡ್ಮಿ ಸಂಸ್ಥೆಯ Redmi Note 14 SE 5G ಸ್ಮಾರ್ಟ್‌ಫೋನ್ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ರೆಡ್ಮಿಯ ಈ ಮೊಬೈಲ್ 5,110mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಇದು Mediatek Dimensity 7025 Ultra ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್ ರೆಡ್, ವೈಟ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ರೆಡ್ಮಿ ನೋಟ್ 14 SE 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : 50MP ಸೆಲ್ಫಿ ಕ್ಯಾಮೆರಾ ಇರುವ ಪಡೆದಿರುವ Vivo V50 ಬೆಲೆಯಲ್ಲಿ ಈಗ ಭಾರೀ ಕಡಿತ!
ಜನಪ್ರಿಯ ವಿವೋ V50 ಮೊಬೈಲ್ ಸದ್ಯ Flipkart ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 6GB RAM + 128 GB ವೇರಿಯಂಟ್ 19,999 ರೂಗಳ ಪ್ರೈಸ್‌ಟ್ಯಾಗ್ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 16,999 ರೂಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಫೋನ್ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಅಂದಹಾಗೆ ಈ ಫೋನ್ ರೆಡ್, ವೈಟ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ರೆಡ್ಮಿ ನೋಟ್ 14 SE 5G ಮೊಬೈಲ್ ಡಿಸ್‌ಪ್ಲೇಯು 6.67 ಇಂಚಿನ AMOLED ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Mediatek Dimensity 7025 Ultra ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಈ ಮೊಬೈಲ್ 6GB RAM + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ.
ಅಲ್ಲದೇ ರೆಡ್ಮಿ ನೋಟ್ 14 SE 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8MP ಸೆನ್ಸಾರ್ ಹಾಗೂ 2MP ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಸ್ಮಾರ್ಟ್‌ಫೋನ್ 20MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಬರೋಬ್ಬರಿ 5,110mAh ಬ್ಯಾಟರಿ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಅಲ್ಲದೇ ಇದು ಧೂಳು ನಿರೋಧಕ, ನೀರು ನಿರೋಧಕ ರೇಟಿಂಗ್ ಪಡೆದಿದೆ.