ರೆಡ್ಮಿ ಕಂಪನಿಯ Redmi Note 14 SE 5G ಮೊಬೈಲ್ ಬಜೆಟ್ ದರದಲ್ಲಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಆದರೆ ಪ್ರಸ್ತುತ ಈ ಸ್ಮಾರ್ಟ್‌ಫೋನ್ Flipkart ವೆಬ್‌ಸೈಟ್ ನಲ್ಲಿ ಆಕರ್ಷಕ ಬೆಲೆ ಇಳಿಕೆ ಕಂಡಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ರೆಡ್ಮಿ ಕಂಪನಿಯ ಈ ಮೊಬೈಲ್ Mediatek Dimensity 7025 Ultra ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು ಇದರೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಹಾಗೆಯೇ ಆಕರ್ಷಕ ಕಲರ್ ಆಯ್ಕೆಗಳನ್ನು ಇದು ಪಡೆದುಕೊಂಡಿದೆ. ಇನ್ನುಳಿದಂತೆ Flipkart ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ Redmi Note 14 SE 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ನಾಳೆ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ Vivo V70 ಸರಣಿ! ಸ್ಟೈಲಿಶ್ ಲುಕ್ ಜೊತೆಗೆ ಅತ್ಯುತ್ತಮ ಕ್ಯಾಮೆರಾ ಖಚಿತ
ರೆಡ್ಮಿ ಸಂಸ್ಥೆಯ Redmi Note 14 SE 5G ಮೊಬೈಲ್ ಪ್ರಸ್ತುತ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 6GB RAM + 128 GB ವೇರಿಯಂಟ್ ಬೆಲೆ 19,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 13,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಗ್ರಾಹಕರು Flipkart Axis ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 700 ರೂಗಳ ಡಿಸ್ಕೌಂಟ್ ಸಿಗಲಿದೆ. ಅಂದಹಾಗೆ ಈ ಫೋನ್ ರೆಡ್, ವೈಟ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
Redmi Note 14 SE ಮೊಬೈಲ್ ಡಿಸ್‌ಪ್ಲೇಯು 6.67 ಇಂಚಿನ AMOLED ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Mediatek Dimensity 7025 Ultra ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಈ ಫೋನ್ 6GB RAM + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ.
ಅಲ್ಲದೇ Redmi Note 14 SE ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8MP ಸೆನ್ಸಾರ್ ಹಾಗೂ 2MP ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 20MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಬರೋಬ್ಬರಿ 5,110mAh ಬ್ಯಾಟರಿ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಅಲ್ಲದೇ ಇದು ಧೂಳು ನಿರೋಧಕ, ನೀರು ನಿರೋಧಕ ರೇಟಿಂಗ್ ಪಡೆದಿದೆ.