200MP ಕ್ಯಾಮೆರಾ ಒಳಗೊಂಡ Redmi Note 15 Pro 5G ಬೆಲೆಯಲ್ಲಿ ಸಖತ್‌ ಇಳಿಕೆ!

HIGHLIGHTS

ಅಮೆಜಾನ್‌ನಲ್ಲಿ ರೆಡ್ಮಿ ನೋಟ್‌ 15 ಪ್ರೊ ಈಗ ಆಫರ್‌ನಲ್ಲಿ ಲಭ್ಯ

ರೆಡ್ಮಿ ನೋಟ್‌ 15 ಪ್ರೊ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದೆ

ರೆಡ್ಮಿಯ ಈ ಮೊಬೈಲ್‌ 6,580mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

200MP ಕ್ಯಾಮೆರಾ ಒಳಗೊಂಡ Redmi Note 15 Pro 5G ಬೆಲೆಯಲ್ಲಿ ಸಖತ್‌ ಇಳಿಕೆ!

ರೆಡ್ಮಿ ಮೊಬೈಲ್‌ ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ Redmi Note 15 Pro 5G ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ MediaTek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,580mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಸಿಲ್ವರ್ ಆಶ್, ಮಿರಾಜ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್‌ 15 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 120W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಒಳಗೊಂಡ realme GT 7T ಬೆಲೆಯಲ್ಲಿ ಭಾರೀ ಇಳಿಕೆ!

Redmi Note 15 Pro 5G ಈಗ ಸಖತ್ ಆಫರ್‌ನಲ್ಲಿ ಲಭ್ಯ

ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ ನೋಟ್‌ 15 ಪ್ರೊ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 33,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 31,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ಸಿಲ್ವರ್ ಆಶ್, ಮಿರಾಜ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Redmi Note 15 Pro

ರೆಡ್ಮಿ ನೋಟ್‌ 15 ಪ್ರೊ ಮೊಬೈಲ್‌ನ ಫೀಚರ್ಸ್‌

ರೆಡ್ಮಿ ನೋಟ್‌ 15 ಪ್ರೊ ಸ್ಮಾರ್ಟ್‌ಫೋನ್‌ 6.83 ಇಂಚಿನ AMOLED ಡಿಸ್‌ಪ್ಲೇ ಪಡೆದಿದ್ದು, ಇದು 1.5K 1,280 x 2,772 ಪಿಕ್ಸೆಲ್‌ಗಳು ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ ಈ ಸ್ಕ್ರೀನ್ 120Hz ರಿಫ್ರೆಶ್ ರೇಟ್‌ ಜೊತೆಗೆ 3,200 ನಿಟ್‌ಗಳ ಬ್ರೈಟ್ನೆಸ್‌ ಪಡೆದಿದೆ. ಇದರ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಪಡೆದುಕೊಂಡಿದೆ. ಹಾಗೆಯೇ ಇದು MediaTek Dimensity 7400 Ultra ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 15 ಆಧಾರಿತ ಹೈಪರ್‌ಓಎಸ್ 2 ನಲ್ಲಿ ಕಾರ್ಯನಿರ್ವಹಿಸುತ್ತವೆ.

ರೆಡ್ಮಿ ನೋಟ್‌ 15 ಪ್ರೊ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 200MP ಸೆನ್ಸಾರ್ ಆಗಿದ್ದು ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ನಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಫೋನ್‌ 45W ಫಾಸ್ಟ್ ಚಾರ್ಜಿಂಗ್ ಮತ್ತು 22.5W ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,580mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile