ಭಾರೀ ಆಫರ್‌ನಲ್ಲಿ Redmi Note 15 Pro 5G ಖರೀದಿಸಲು ಇದುವೇ ಅತ್ಯುತ್ತಮ ಅವಕಾಶ!
ರೆಡ್ಮಿ ನೋಟ್ 15 ಪ್ರೊ ಬೆಲೆಯಲ್ಲಿ ಸಖತ್ ಇಳಿಕೆ
ರೆಡ್ಮಿಯ ಈ ಮೊಬೈಲ್ 200MP ಕ್ಯಾಮೆರಾ ರಚನೆ ಪಡೆದುಕೊಂಡಿದೆ
ರೆಡ್ಮಿಯ ಈ ಫೋನ್ 6,580mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ
ಇ ಕಾಮರ್ಸ್ ವೆಬ್‌ಸೈಟ್‌ಗಳು ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್ ಘೋಷಿಸುತ್ತವೆ. ಈ ನಿಟ್ಟಿನಲ್ಲಿ ಅನೇಕರು ಇ ಕಾಮರ್ಸ್ ಮೂಲಕ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಇಷ್ಟಪಡುತ್ತಾರೆ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ರೆಡ್ಮಿ ಕಂಪನಿಯ Redmi Note 15 Pro 5G ಸ್ಮಾರ್ಟ್‌ಫೋನ್‌ಗೆ ಬೊಂಬಾಟ್ ರಿಯಾಯಿತಿ ಘೋಷಿಸಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ರೆಡ್ಮಿ ನೋಟ್ 15 ಪ್ರೊ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ ಹಾಗೂ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ 200MP ಕ್ಯಾಮೆರಾ ಸಪೋರ್ಟ್ ಸಹ ಒಳಗೊಂಡಿದೆ. ಹಾಗಾದರೆ ಅಮೆಜಾನ್ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್ 15 ಪ್ರೊ ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : ನಾಳೆ ದೇಶೀಯ ಮಾರುಕಟ್ಟೆಗೆ Motorola Edge 70 Pro ಬಿಡುಗಡೆ! ಜಬರ್ದಸ್ತ್ ಫೀಚರ್ಸ್ ನಿರೀಕ್ಷೆ
Redmi Note 15 Pro 5G ಫೋನ್ ಈಗ ಆಫರ್‌ನಲ್ಲಿ ಲಭ್ಯ
ಸ್ಟೈಲಿಶ್ ಲುಕ್ ಹೊಂದಿರುವ ರೆಡ್ಮಿ ನೋಟ್ 15 ಪ್ರೊ ಮೊಬೈಲ್ ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್ 8GB + 256GB ವೇರಿಯಂಟ್ ಬೆಲೆ 33,999 ರೂ.ಗಳು ಪ್ರೈಸ್‌ಟ್ಯಾಗ್ ಹೊಂದಿದ್ದು, ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 29,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಸಿಲ್ವರ್ ಆಶ್, ಮಿರಾಜ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ರೆಡ್ಮಿ ನೋಟ್ 15 ಪ್ರೊ ಮೊಬೈಲ್‌ನ ಫೀಚರ್ಸ್
ರೆಡ್ಮಿ ನೋಟ್ 15 ಪ್ರೊ ಸ್ಮಾರ್ಟ್‌ಫೋನ್ 6.83 ಇಂಚಿನ AMOLED ಡಿಸ್‌ಪ್ಲೇ ಪಡೆದಿದ್ದು, ಇದು 1.5K 1,280 x 2,772 ಪಿಕ್ಸೆಲ್‌ಗಳು ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ ಈ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 3,200 ನಿಟ್‌ಗಳ ಬ್ರೈಟ್ನೆಸ್ ಪಡೆದಿದೆ. ಇದರ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಪಡೆದುಕೊಂಡಿದೆ. ಹಾಗೆಯೇ ಇದು MediaTek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 15 ಆಧಾರಿತ ಹೈಪರ್‌ಓಎಸ್ 2 ನಲ್ಲಿ ಕಾರ್ಯನಿರ್ವಹಿಸುತ್ತವೆ.
ರೆಡ್ಮಿ ನೋಟ್ 15 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 200MP ಸೆನ್ಸಾರ್ ಆಗಿದ್ದು ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ನಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಫೋನ್ 45W ಫಾಸ್ಟ್ ಚಾರ್ಜಿಂಗ್ ಮತ್ತು 22.5W ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,580mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile