ಜನಪ್ರಿಯ Redmi Note 15 SE 5G ಬೆಲೆಯಲ್ಲಿ ಸಖತ್ ಇಳಿಕೆ! ಈಗ ಕಡಿಮೆ ಬೆಲೆಯಲ್ಲಿ ಖರೀದಿಸಬಹುದು
ರೆಡ್ಮಿ ಮೊಬೈಲ್ ಕಂಪನಿಯ ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ Redmi Note 15 SE 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಅಂದಹಾಗೆ ರೆಡ್ಮಿ ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ 5,800mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಒಳಗೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ರೆಡ್ಮಿ ನೋಟ್ 15 SE 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ನಾಳೆ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ Samsung Galaxy M47 5G ಸ್ಮಾರ್ಟ್‌ಫೋನ್!
Redmi Note 15 SE 5G ಬೆಲೆಯಲ್ಲಿ ಭಾರೀ ಇಳಿಕೆ
ಅತ್ಯುತ್ತಮ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ ಮೊಬೈಲ್ ಕಂಪನಿಯ ರೆಡ್ಮಿ ನೋಟ್ 15 SE 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 34,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 21,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಸ್ಮಾರ್ಟ್‌ಫೋನ್ ಕಾರ್ಬನ್ ಬ್ಲಾಕ್, ಕ್ರಿಮ್ಸನ್ ರಿಸರ್ವ್ (ರೆಡ್) ಮತ್ತು ಫ್ರಾಸ್ಟೆಡ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ರೆಡ್ಮಿ ನೋಟ್ 15 SE 5G ಫೋನ್ ಫೀಚರ್ಸ್
ರೆಡ್ಮಿ ಕಂಪನಿಯ ನೋಟ್ 15 SE 5G ಸ್ಮಾರ್ಟ್‌ಫೋನ್ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 3,200 nits ಪೀಕ್ ಬ್ರೈಟ್ನೆಸ್ ಬೆಂಬಲಿತ 1,080×2,392 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಪಡೆದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರೆಡ್ಮಿ ನೋಟ್ 15 SE 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 20 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 5,800mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
