256GB ಸ್ಟೋರೇಜ್ ಇರುವ Redmi ಕಂಪನಿಯ ಈ ಸ್ಟೈಲಿಶ್‌ ಮೊಬೈಲ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

HIGHLIGHTS

ರೆಡ್ಮಿ ನೋಟ್‌ 15 SE 5G ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ರೆಡ್ಮಿಯ ಈ ಫೋನ್‌ 5,800mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ರೆಡ್ಮಿ ಕಂಪನಿಯ ಈ ಫೋನ್‌ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ

ಪ್ರಮುಖ ಮೊಬೈಲ್‌ ಬ್ರಾಂಡ್‌ಗಳ ಪೈಕಿ ಒಂದಾದ ರೆಡ್ಮಿ ಕಂಪನಿಯ Redmi Note 15 SE 5G ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 5,800mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಕಾರ್ಬನ್ ಬ್ಲಾಕ್, ಕ್ರಿಮ್ಸನ್ ರಿಸರ್ವ್ (ರೆಡ್) ಮತ್ತು ಫ್ರಾಸ್ಟೆಡ್ ವೈಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್‌ 15 SE 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 45W ಫಾಸ್ಟ್‌ ಸಪೋರ್ಟ್‌ ಇರುವ Oppo ಸಂಸ್ಥೆಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

Redmi Note 15 SE 5G ಫೋನಿಗೆ ಬಿಗ್ ಡಿಸ್ಕೌಂಟ್‌

ಗ್ರಾಹಕಸ್ನೇಹಿ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿರುವ ರೆಡ್ಮಿ ನೋಟ್‌ 15 SE 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 39,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 27,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್‌ ಕಾರ್ಬನ್ ಬ್ಲಾಕ್, ಕ್ರಿಮ್ಸನ್ ರಿಸರ್ವ್ (ರೆಡ್) ಮತ್ತು ಫ್ರಾಸ್ಟೆಡ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

ರೆಡ್ಮಿ ನೋಟ್‌ 15 SE 5G ಮೊಬೈಲ್‌ನ ಫೀಚರ್ಸ್‌

ರೆಡ್ಮಿ ನೋಟ್‌ 15 SE 5G ಮೊಬೈಲ್‌ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 3,200 nits ಪೀಕ್‌ ಬ್ರೈಟ್ನೆಸ್‌ ಬೆಂಬಲಿತ 1,080×2,392 ಪಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ ನೋಟ್‌ 15 SE 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 20 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,800mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :