ಡ್ಯುಯಲ್ ಕ್ಯಾಮೆರಾ ಇರುವ Redmi Note 15 SE 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

ರೆಡ್ಮಿ ನೋಟ್‌ 15 SE ಫೋನ್‌ ಬಿಗ್ ಆಫರ್‌ ಬೆಲೆಯಲ್ಲಿ ಲಭ್ಯ

ರೆಡ್ಮಿ ನೋಟ್‌ 15 SE ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ

ರೆಡ್ಮಿ ಕಂಪನಿಯ ಈ ಮೊಬೈಲ್‌ 5,800mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ರೆಡ್ಮಿ ಸಂಸ್ಥೆಯ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆದಿವೆ. ಅವುಗಳ ಪೈಕಿ ಇತ್ತೀಚಿನ Redmi Note 15 SE 5G ಸ್ಮಾರ್ಟ್‌ಫೋನ್‌ ಬಜೆಟ್‌ ವಿಭಾಗದಲ್ಲಿ ಭರ್ಜರಿ ಸದ್ದು ಮಾಡಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಸಮ್ಮರ್ ಸೇಲ್‌ನಲ್ಲಿ ಭಾರೀ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಆಯ್ದ ಬ್ಯಾಂಕ್‌ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ. ಅಂದಹಾಗೆ ರೆಡ್ಮಿ ಸಂಸ್ಥೆಯ ಈ ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ 5,800mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಒಳಗೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್‌ 15 SE 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Vi ಟೆಲಿಕಾಂನ ಈ ಅಗ್ಗದ ಪೋಸ್ಟ್‌ಪೇಯ್ಡ್‌ ಪ್ಲಾನಿನಲ್ಲಿ Unlimited Data ಪ್ರಯೋಜನ

Redmi Note 15 SE 5G ಮೊಬೈಲ್‌ಗೆ ಬಿಗ್‌ ಆಫರ್‌

ರೆಡ್ಮಿ ನೋಟ್‌ 15 SE 5G ಮೊಬೈಲ್ ಪ್ರಸ್ತುತ Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 6GB + 128GB ವೇರಿಯಂಟ್‌ ಬೆಲೆ 24,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 19,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಸ್ಮಾರ್ಟ್‌ಫೋನ್‌ ಕಾರ್ಬನ್ ಬ್ಲಾಕ್, ಕ್ರಿಮ್ಸನ್ ರಿಸರ್ವ್ (ರೆಡ್) ಮತ್ತು ಫ್ರಾಸ್ಟೆಡ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ರೆಡ್ಮಿ ನೋಟ್‌ 15 SE 5G ಮೊಬೈಲ್‌ ಫೀಚರ್ಸ್‌

ರೆಡ್ಮಿ ನೋಟ್‌ 15 SE 5G ಮೊಬೈಲ್‌ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 3,200 nits ಪೀಕ್‌ ಬ್ರೈಟ್ನೆಸ್‌ ಬೆಂಬಲಿತ 1,080×2,392 ಪಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ ನೋಟ್‌ 15 SE 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 20 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,800mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :